ಪುತ್ತೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಮೂಡಬಿದಿರೆಯಲ್ಲಿ ನಡೆಸಿದ 2021-22 ನೇ ಸಾಲಿನ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಯ ಮೂವರು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಸ್ಕೌಟ್ಸ್ ವಿಭಾಗದಲ್ಲಿ ಪುತ್ತೂರಿನ ಕಲ್ಪವೃಕ್ಷ ಆರ್ಗನಿಕ್ಸ್ ಮಾಲಕ ಸೂರಪ್ಪ ಗೌಡ ಹಾಗೂ ಹರಿಣಾಕ್ಷಿಯವರ ಪುತ್ರ ಸ್ವಸ್ತಿಕ್ ಎ ಎಸ್, ಕಲ್ಲರ್ಪೆಯ ಪಾಪ್ಯುಲರ್ ಸ್ವೀಟ್ಸ್ನ ಉದ್ಯೋಗಿಯಾಗಿರುವ ಸತೀಶ್ ಬಿ ಹಾಗೂ ಜಯಶ್ರೀ ಯವರ ಪುತ್ರ ಮನ್ವಿತ್ ಎಸ್ ಹಾಗೂ ಗೈಡ್ಸ್ ವಿಭಾಗದಲ್ಲಿ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ಸಹಶಿಕ್ಷಕ ಉದಯ ಕುಮಾರ್ ರೈ ಎಸ್ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂಬ್ರ ಉಪನ್ಯಾಸಕಿ ದಿವ್ಯಾ ಆಳ್ವ ಎಸ್ ಆರ್ ಅವರ ಪುತ್ರಿ ಪ್ರಾರ್ಥನಾ ರಾಜ್ಯ ಪುರಸ್ಕಾರ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿರುತ್ತಾರೆ.
ಈ ವಿದ್ಯಾರ್ಥಿಗಳಿಗೆ ವಿದ್ಯಾಲಯದ ಸ್ಕೌಟ್ ಮಾಸ್ಟರ್ ಸತೀಶ್ ಇರ್ದೆ ಹಾಗೂ ಗೈಡ್ಸ್ ಶಿಕ್ಷಕಿ ಚಂದ್ರಕಲಾ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]