ಕಟೀಲು ಮೇಳದಲ್ಲಿ ಸಹಾಯಕ ಮದ್ದಲೆಗಾರರಾಗಿದ್ದ ಚಿದಾನಂದ ಗೌಡ (31 ವರ್ಷ) ಇವರು ಅಲ್ಪಕಾಲದ ಅಸೌಖ್ಯದಿಂದ 05-10-2022ರಂದು ಸುರತ್ಕಲ್‌ನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಕಳೆದ 15 ವರ್ಷಗಳಿಂದ ಕಟೀಲು ಮೇಳದಲ್ಲಿ ನಿತ್ಯವೇಷಧಾರಿಯಾಗಿ, ಸಹಾಯಕ ಮದ್ದಲೆಗಾರರಾಗಿ ತಿರುಗಾಟ ನಡೆಸುತ್ತಿದ್ದ ಇವರು ಪಾರಂಪರಿಕ ಚೌಕಟ್ಟಿನೊಳಗೆ ಮದ್ದಲೆ ನುಡಿತಗಳಿಗೆ ಮತ್ತು ಚಂಡೆವಾದಕರಿಗೆ ಪುರಕವಾಗಿ ಒತ್ತು ಮದ್ದಲೆಯನ್ನು ನುಡಿಸುವ ಕೌಶಲ್ಯವನ್ನು ಹೊಂದಿದ್ದರು.
ಅವಿವಾಹಿತರಾಗಿದ್ದ ಇವರು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ಸೂಚಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
