ಮಂಗಳೂರು: ಜಾಗತಿಕ ಬಂಟ ಪ್ರತಿಷ್ಠಾನದ ಆಶ್ರಯದಲ್ಲಿ ಜರಗಿದ 26 ನೇ ವಾರ್ಷಿಕ ಮಹಾಸಭೆಯಲ್ಲಿ ಹಿರಿಯ ಯಕ್ಷಗಾನ ವಿದ್ವಾಂಸ, ಪ್ರಸಂಗ ಕರ್ತ ಹಾಗೂ ನಿವೃತ್ತ ಶಿಕ್ಷಕ ಕಂದಾವರ ರಘುರಾಮ ಶೆಟ್ಟಿ ಅವರನ್ನು ಸನ್ಮಾನಿಸಲಾಯ್ತು.
ಇದೇ ಸಂದರ್ಭದಲ್ಲಿ ಪ್ರತಿಷ್ಠಾನದ ವತಿಯಿಂದ ಹಿರಿಯ ಯಕ್ಷಗಾನ ಕಲಾವಿದರಿಗೆ ರೂ.25 ಸಾವಿರ ನಗದಿನೊಂದಿಗೆ ನೀಡಲಾಗುವ ಡಾ.ಡಿ.ಕೆ.ಚೌಟ ದತ್ತಿನಿಧಿ ಪ್ರಶಸ್ತಿಯನ್ನು ಜಾಗತಿಕ ಬಂಟ ಪ್ರತಿಷ್ಠಾನದ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅವರು ರಘುರಾಮ ಶೆಟ್ಟರಿಗೆ ಪ್ರದಾನ ಮಾಡಿದರು.
ಪ್ರಶಸ್ತಿ ಆಯ್ಕೆ ಸಮಿತಿ ಸಂಚಾಲಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಅಭಿನಂದನಾ ಭಾಷಣ ಮಾಡಿ – ಯಕ್ಷಗಾನ,ನಾಟಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡುವುದರ ಜತೆಗೆ ತೆಂಕು – ಬಡಗು ಮೇಳಗಳು ಆಡಿ ಜಯಭೇರಿ ಗಳಿಸಿದ 36 ಜನಪ್ರಿಯ ಪ್ರಸಂಗಗಳನ್ನು ಬರೆದಿರುವ 87ರ ಹರೆಯದ ಕಂದಾವರ ರಘುರಾಮ ಶೆಟ್ಟರ ಜೀವನ ಮತ್ತು ಸಾಧನೆಗಳನ್ನು ಪರಿಚಯಿಸಿದರು.
ಜಾಗತಿಕ ಬಂಟ ಪ್ರತಿಷ್ಠಾನದ ಪೋಷಕರಾದ ಡಾ.ಬಿ.ಆರ್.ಶೆಟ್ಟಿ, ಮಾಜಿ ಅಧ್ಯಕ್ಷ ಡಾ.ಎಂ. ಶಾಂತಾರಾಮ ಶೆಟ್ಟಿ , ಉಪಾಧ್ಯಕ್ಷ ಕುಶಲ್ ಎಸ್.ಹೆಗ್ಡೆ, ಗಣ್ಯರಾದ ಕೆ. ಸಚ್ಚಿದಾನಂದ ಹೆಗ್ಡೆ, ಡಾ.ಬಿ.ಸಂಜೀವ ರೈ, ಸಿಎ.ರಘುಚಂದ್ರ ಶೆಟ್ಟಿ, ಆಯ್ಕೆ ಸಮಿತಿಯ ಪ್ರೊ.ಜಿ.ಆರ್.ರೈ ಮತ್ತು ಪಳ್ಳಿ ಕಿಶನ್ ಹೆಗ್ಡೆ, ಸನ್ಮಾನಿತರ ಬಂಧುಗಳಾದ ಶೈಲಜಾ ಮತ್ತು ಅಭಿರಾಮ ಶೆಟ್ಟಿ ಉಪಸ್ಥಿತರಿದ್ದರು.
ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ವೈ.ಸುಧೀರ್ ಕುಮಾರ್ ಶೆಟ್ಟಿ ಸ್ವಾಗತಿಸಿ, ನ್ಯಾಯವಾದಿ ಕಳ್ಳಿಗೆ ತಾರಾನಾಥ ಶೆಟ್ಟಿ ವಂದಿಸಿದರು. ಪತ್ರಕರ್ತ ಮನೋಹರ ಪ್ರಸಾದ್ ನಿರೂಪಿಸಿದರು.

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

