ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ.ಜಿ 61ನೇ ಮುಕ್ತ ರಾಷ್ಟ್ರೀಯ ಅತ್ಲೆಟಿಕ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಕ್ಟೋಬರ್ 15 ರಿಂದ 19 ರವರೆಗೆ ನಡೆಯುವ ಈ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಟ್ರಿಪಲ್‌ಜಂಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುತ್ತಾರೆ.
ಇವರು ಇತ್ತೀಚಿಗೆ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಇವರು ಉತ್ತಮ ಸಾಧನೆಯನ್ನು ಮಾಡುತ್ತಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು