ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿ0ಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟವು ನವೆಂಬರ್ 17 ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.


ನವೆಂಬರ್ 17 ಗುರುವಾರ ಪೂರ್ವಾಹ್ನ 9.30 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್.ವಿ.ಎಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.
ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಪಂದ್ಯಾಟದ ಸಂಘಟನಾ ಸಮಿತಿಯ ಅಧ್ಯಕ್ಷ ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಗೌರವ ಅತಿಥಿಗಳಾಗಿ ಭಾಗವಹಿಸುತ್ತಾರೆ.
ಎರಡು ವಾಲಿಬಾಲ್ ಅಂಕಣಗಳಲ್ಲಿ ಈ ಸ್ಪರ್ಧೆಗಳು ನಡೆಯಲಿದ್ದು, ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿ0ಗ್ ಕಾಲೇಜುಗಳ 17 ತಂಡಗಳು ಇದರಲ್ಲಿ ಭಾಗವಹಿಸುತ್ತವೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
