

ಯಕ್ಷಲೋಕದ ಗಾನದೇವತೆಯ ಕಾಳಿಂಗ ನಾವಡರ ನೆನಪಿನಲ್ಲಿ ಕಲಾಕದಂಬ ಆರ್ಟ್ ಸೆಂಟರ್ ಪ್ರತೀ ವರ್ಷ ಯಕ್ಷಗಾನದ ಸಾಧಕರೊಬ್ಬರಿಗೆ ಕಾಳಿಂಗ ನಾವಡ ಪ್ರಶಸ್ತಿ ನೀಡುತ್ತಿದೆ.
ಹತ್ತು ಸಾವಿರ ನಗದು, ಬೆಳ್ಳಿ ತಟ್ಟೆ, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆಯನ್ನು ಕಾಳಿಂಗ ನಾವಡ ಪ್ರಶಸ್ತಿ ಒಳಗೊಂಡಿರುತ್ತದೆ.
ಗುಂಡ್ಮಿ ಸದಾನಂದ ಐತಾಳ್, ಸುಬ್ರಹ್ಮಣ್ಯ ಧಾರೇಶ್ವರ್, ಕೆಪ್ಪೆಕೆರೆ ಸುಬ್ರಾಯ ಹೆಗಡೆ, ಎಳ್ಳಾರೆ ವೆಂಕಟ್ರಾಯ ನಾಯಕ್, ನೆಬ್ಬೂರು ನಾರಾಯಣ ಹೆಗಡೆ,ಕರ್ಕಿ ಪ್ರಭಾಕರ ಭಂಡಾರಿ, ಕೆ.ಪಿ ಹೆಗ್ಡೆ, ಟಿ ಜಯಂತ್ ಕುಮಾರ್, ಮಂದಾರ್ತಿ ರಾಮಕೃಷ್ಣ, ಶ್ರೀಧರ ಹೆಬ್ಬಾರ್, ಗೋವಿಂದ ಉರಾಳ ಹಾಗೂ ಶಂಕರ ಭಾಗವತ ಯಲ್ಲಾಪುರ ಅವರು ಈಗಾಗಲೇ ಕಾಳಿಂಗ ನಾವಡ ಪ್ರಶಸ್ತಿಗೆ ಬಾಜನರಾಗಿದ್ದಾರೆ.
ಈ ಸಾಲಿನ “ಕಾಳಿಂಗ ನಾವಡ ಪ್ರಶಸ್ತಿ” ಯನ್ನು ಖ್ಯಾತ ಭಾಗವತರು, ಮದ್ದಳೆವಾದಕರು ಹಾಗೂ ಚಂಡೆ ವಾದಕರೂ ಆಗಿ ಈಗಲೂ ತಮ್ಮ ಪಾರಮ್ಯ ಮೆರೆಯುತ್ತಿರುವ “ಬಿದ್ಕಲ್‌ಕಟ್ಟೆ ಕೃಷ್ಣಯ್ಯ ಆಚಾರ್ಯರಿಗೆ” ಬೆಂಗಳೂರಿನ ಚಾಮರಾಜಪೇಟೆಯ ಉದಯಭಾನು ಕಲಾಸಂಘದ ಸಭಾ ಭವನದಲ್ಲಿ
25-12-22 ರ ಸಂಜೆ 5 ಘಂಟೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ನೀಡಲಾಗುವುದೆಂದು ಕಲಾಕದಂಬ ಆರ್ಟ್ ಸೆಂಟರ್ ನ ನಿರ್ದೇಶಕರಾದ ಡಾ.ರಾಧಾಕೃಷ್ಣ ಉರಾಳರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ-9448510582,9886066732
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ

