ರಾಮನಗರದ ಶ್ರೀ ಶಾರದಾ ಕಲಾ ಮಂಟಪದಲ್ಲಿ ಭಾರತೀಯ ಸೇನೆಯ ನಿವೃತ್ತ ಯೋಧ ಹವಾಲ್ದಾರ್ ಎನ್. ವಿಶ್ವನಾಥ್ ಶೆಣೈ ಇವರ ಅಭಿನಂದನಾ ಕಾರ್ಯಕ್ರಮದ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ ಸಂಯೋಜನೆಯಲ್ಲಿ ಕವಿ ವಾಮನ ಪುರೋಹಿತ ಕೊಯ್ಯುರು ವಿರಚಿತ ವೀರವರ್ಮ ವಿಜಯ ತಾಳಮದ್ದಳೆ ಜರಗಿತು.
ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ ಹಿಮ್ಮೇಳದಲ್ಲಿ ಮೋಹನ ಶರವೂರು, ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ ಅರ್ಥದಾರಿಗಳಾಗಿ ಮಹಾಲಿಂಗೇಶ್ವರ ಭಟ್ ಪೆರಿಯಡ್ಕ, ಪಾತಾಳ ಅಂಬಾ ಪ್ರಸಾದ್, ಭಾಸ್ಕರ ಬಾರ್ಯ, ಸಂಜೀವ ಪಾರೆಂಕಿ, ದಿವಾಕರ ಆಚಾರ್ಯ ನೇರಂಕಿ, ಬಾಸಮೆ ನಾರಾಯಣ ಭಟ್, ರಾಘವ ಗೇರುಕಟ್ಟೆ , ವಿಜಯಕುಮಾರ್ ಕೊಯ್ಯೂರ್ , ದಿವಾಕರ ಆಚಾರ್ಯ ಗೇರುಕಟ್ಟೆ ಭಾಗವಹಿಸಿದ್ದರು.
ಕಾರ್ಯಕ್ರಮದ ಪ್ರಾಯೋಜಕರಾದ ಉಮೇಶ್ ಶೆಣೈ ಮತ್ತು ನಿವೃತ್ತ ಯೋಧ ಹವಾಲ್ದಾರ್ ವಿಶ್ವನಾಥ ಶೆಣೈ ಕಲಾವಿದರನ್ನು ಗೌರವಿಸಿದರು.
ಮುಂಚಿತವಾಗಿ ನಡೆದ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು , ವಿಧಾನಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಕರ್ನಾಟಕ ನಿವೃತ್ತ ಯೋಧರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಿ. ಚಂದಪ್ಪ ಮೂಲ್ಯ, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಷಾಚಂದ್ರ ಮುಳಿಯ, ಉಪ್ಪಿನಂಗಡಿ ಸಿಎ ಬ್ಯಾಂಕಿನ ನಿರ್ದೇಶಕರಾದ ಶ್ಯಾಮಲ ಶೆಣೈ, ಸಂಘದ ಸದಸ್ಯರಾದ ಮಹಾಲಿಂಗೇಶ್ವರ ಭಟ್ ಪೆರಿಯಡ್ಕ ಶ್ರೀಪತಿ ಭಟ್ ಉಪ್ಪಿನಂಗಡಿ, ಸಂಜೀವ ಪಾರೆಂಕಿ ಉಪಸ್ಥಿತಿಯಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ವತಿಯಿಂದ ನಿವೃತ್ತಯೋಧ ವಿಶ್ವನಾಥ ಶೆಣೈ ಮತ್ತು ಅವರ ಪತ್ನಿ ಶ್ರೀಮತಿ ಶೆಣೈ ಯವರನ್ನು ಗೌರವಿಸಲಾಯಿತು.
ಶ್ರೀ ಕಾಳಿಕಾಂಬಾ ಯಕ್ಷಗಾನ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು