ಖ್ಯಾತ ಯಕ್ಷಗಾನ ಭಾಗವತರಾದ ತಿಮ್ಮಪ್ಪ ಭಾಗವತ ಬಾಳೆಹದ್ದ ಅವರು ನಿನ್ನೆ ನಿಧನರಾಗಿದ್ದಾರೆ. ಅವರು ನಿನ್ನೆ ಸಂಜೆ ಆಕಸ್ಮಿಕವಾಗಿ ಮೃತ್ಯುವಶರಾಗಿದ್ದಾರೆ.
ನಿನ್ನೆ ದಿನಾಂಕ 13.12.2022ರ ಮಂಗಳವಾರ ಸಂಜೆ ಘಟಿಸಿದ ರಸ್ತೆ ಅಫಘಾತವೊಂದರಲ್ಲಿ ಅವರು ದುರದೃಷ್ಟಕರವಾಗಿ ಸಾವನ್ನಪ್ಪಿದ್ದಾರೆ. ಯಲ್ಲಾಪುರ ತಾಲೂಕಿನ ಬಾಳೆಹದ್ದ ಮೂಲದವರಾಗಿದ್ದ ಅವರು ಬಡಗುತಿಟ್ಟಿನ ಭಾಗವತರಾಗಿ ಜನಪ್ರಿಯರಾಗಿದ್ದರು.
ಯಲ್ಲಾಪುರ ಮತ್ತು ಶಿರಸಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಎರಡು ಕಾರುಗಳ ನಡುವೆ ಉಂಟಾದ ಅಫಘಾತದಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಅವರನ್ನು ಕೂಡಲೇ ಶಿರಸಿಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ನಿನ್ನೆ ಮಧ್ಯರಾತ್ರಿ ಮೃತಪಟ್ಟಿದ್ದಾರೆ.
ತಿಮ್ಮಪ್ಪ ಬಾಳೆಹದ್ದ ಅವರು ಹೊಸ್ತೋಟ ಮಂಜುನಾಥ ಭಾಗವತರ ಶಿಷ್ಯರಾಗಿದ್ದರು ಮತ್ತು ಬಡಗುತಿಟ್ಟಿನ ಭಾಗವತಿಕೆಯ ರಾಗ ಮತ್ತು ಮಟ್ಟುಗಳಲ್ಲಿ ವಿಶೇಷ ಪ್ರಾವೀಣ್ಯತೆಯನ್ನು ಪಡೆದಿದ್ದರು.
ಅವರ ನಿಧನಕ್ಕೆ ಯಕ್ಷಗಾನ ಕಲಾಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು