
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಡಿ.24ರಂದು ಫಾಕಲ್ಟಿ ಡೆವಲಪ್‌ಮೆಂಟ್ ಕಾರ್ಯಕ್ರಮ ಹಾಗೂ ಹೆತ್ತವರೊಂದಿಗೆ ಸಂವಾದ ನಡೆಯಲಿದೆ.
ಅಂತರಾಷ್ಟ್ರೀಯ ತರಬೇತುದಾರ, ಶಿಕ್ಷಣ ತಜ್ಞ ಡಾ.ಗುರುರಾಜ ಕರಜಗಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಬೆಳಗ್ಗೆ 9ಕ್ಕೆ ಪೂರ್ವಾಹ್ನದ ಕಾರ್ಯಕ್ರಮವನ್ನು ಡಾ.ಕರಜಗಿ ಉದ್ಘಾಟಿಸಿ, ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸುವರು. ತದನಂತರ 10.30ರಿಂದ 12.30ರ ವರೆಗೆ ಶಿಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ.
ಅಪರಾಹ್ನ 1.30ರಿಂದ ಹೆತ್ತವರೊಂದಿಗೆ ಡಾ.ಗುರುರಾಜ ಕರಜಗಿ ಸಂವಾದ ನಡೆಸಲಿದ್ದು ಸಾರ್ವಜನಿಕರಿಗೂ ಮುಕ್ತ ಅವಕಾಶ ಕಲ್ಪಿಸಿಕೊಡಲಾಗಿದೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಪೂರ್ವಾಹ್ನ ಮತ್ತು ಅಪರಾಹ್ನದ ಕಾರ್ಯಕ್ರಮಗಳ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶ್ರಾಂತ ಪ್ರಾಚಾರ್ಯ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಡಾ.ಎಚ್.ಮಾಧವ ಭಟ್ ಹೆತ್ತವರೊಂದಿಗಿನ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವಿಶ್ರಾಂತ ಪ್ರಾಚಾರ್ಯ ಡಾ.ಎಂ.ಸಿ.ಪ್ರಕಾಶ್ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಉಪಸ್ಥಿತರಿರುವರು.
ಪೂರ್ವಾಹ್ನ ಹಾಗೂ ಅಪರಾಹ್ನದ ಕಾರ್ಯಕ್ರಮಗಳು ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

