ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪುಣೆ-ರಾಯಗಡ ಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಶನಿವಾರ ನಸುಕಿನ ವೇಳೆಯಲ್ಲಿ ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ ಮತ್ತು 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಣೆ-ರಾಯಗಢ ಗಡಿಯಲ್ಲಿ ಮುಂಜಾನೆ 4:30ಕ್ಕೆ ಬಸ್ ಪುಣೆಯ ಪಿಂಪಲ್ ಗುರವ್‌ನಿಂದ ಗೋರೆಗಾಂವ್‌ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಬಸ್‌ನಲ್ಲಿ 41 ಮಂದಿ ಪ್ರಯಾಣಿಕರಿದ್ದರು. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಟ್ವಿಟರ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಪಘಾತವನ್ನು “ದುರದೃಷ್ಟಕರ” ಎಂದು ಬಣ್ಣಿಸಿದ್ದಾರೆ ಮತ್ತು ಸ್ಥಳೀಯ ಆಡಳಿತವು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಹೇಳಿದ್ದಾರೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಮತ್ತು ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಅಪಘಾತ ಸಂಭವಿಸಿದ ಸ್ಥಳದ ಸಮೀಪ ರಸ್ತೆ ಬದಿಯಲ್ಲಿ ಆಂಬ್ಯುಲೆನ್ಸ್ ಹಾಗೂ ಪೊಲೀಸ್ ವಾಹನಗಳು ಸಾಲುಸಾಲಾಗಿ ನಿಂತಿರುವುದು ಕಂಡು ಬಂದಿದೆ.