ಕರ್ನಾಟಕ ಕಲಾದರ್ಶಿನಿಗೆ ನಿಡಂಬೂರು ಬೀಡುಬಲ್ಲಾಳ ಪ್ರಶಸ್ತಿ.
ಅಂಬಲಪಾಡಿ ದೇವಳದ ಧರ್ಮದರ್ಶಿಯಾಗಿ ಕಲೆ, ಸಂಸ್ಕೃತಿಯನ್ನು ವಿಶೇಷವಾಗಿ ಪ್ರೋತ್ಸಾಹಿಸುತ್ತಿದ್ದ ನಿ. ಬೀ. ಅಣ್ಣಾಜಿ ಬಲ್ಲಾಳರ ಹೆಸರಿನಲ್ಲಿ ಅವರ ಸುಪುತ್ರ ಡಾ. ನಿ. ಬೀ. ವಿಜಯ ಬಲ್ಲಾಳರು ಸ್ಥಾಪಿಸಿದ ‘ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿ’ಗೆ
ಮೂರು ದಶಕಗಳಿಂದ ಬೆಂಗಳೂರಿನಲ್ಲಿ ಯಕ್ಷಗಾನ ಕಲಿಕೆ, ಪ್ರದರ್ಶನ, ಯಕ್ಷಗಾನ ಸಂಬಂಧೀ ಗೋಷ್ಠಿ, ಕಮ್ಮಟಗಳನ್ನು ನಡೆಸುತ್ತಾ ಕ್ರಿಯಾಶೀಲವಾಗಿರುವ ಕರ್ನಾಟಕ ಕಲಾದರ್ಶಿನಿ ಸಂಸ್ಥೆ ಆಯ್ಕೆಯಾಗಿದೆ.
ಪ್ರಶಸ್ತಿಯು ರೂಪಾಯಿ ಹತ್ತು ಸಾವಿರ ನಗದು ಪುರಸ್ಕಾರವನ್ನೊಳಗೊಂಡಿದೆ.
ಫೆಬ್ರವರಿ 03, 2024 ಶನಿವಾರ ಕಂಬ್ಳಕಟ್ಟದ ಶ್ರೀ ಜನಾರ್ದನ ಮಂಟಪದಲ್ಲಿ ನಡೆಯುವ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾಮಂಡಳಿಯ 66ನೇ ವಾರ್ಷಿಕೋತ್ಸವದಂದು ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಸಂಸ್ಥೆಯ ಅಧ್ಯಕ್ಷ ಕೆ. ಅಜಿತ್ ಕುಮಾರ್, ಕಾರ್ಯದರ್ಶಿ ಪ್ರಕಾಶ್ ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು