ಅಯೋದ್ಯೆ ಶ್ರೀ ರಾಮಲಲ್ಲಾ ಪ್ರತಿಷ್ಠಾ ದಿನದಿಂದ 48 ದಿನಗಳ ಕಾಲ ನಡೆಯುತ್ತಿರುವ ಮಂಡಲ ಪೂಜೆ ಮತ್ತು ಪಲ್ಲಕ್ಕಿ ಉತ್ಸವಕ್ಕೆ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥರ ಅನುಗ್ರಹದೊಂದಿಗೆ ಫೆಬ್ರವರಿ 24 ಮತ್ತು 25ನೇ ತಾರೀಖಿನಂದು ಶ್ರೀ ಮಹಾಲಿಂಗೇಶ್ವರ ಚೆಂಡೆ ಬಳಗ ಬೆಳ್ಕಳೆ ಇವರಿಂದ ಚೆಂಡೆ ಸೇವೆ ನಡೆಯಿತು.
ಬಳಗದಿಂದ ಉಮೇಶ್ ಬಾಧ್ಯ, ಶ್ರೀಹರ್ಷ ಬೆಳ್ಕಳೆ, ರವಿ ಸಾಮಗ, ಸುನಿಲ್ ಭಟ್, ಶ್ರೀನಿಧಿ ಹಂದೆ, ಶ್ರೀನಾಥ್,ರಾಘವೇಂದ್ರ,ವಿಕ್ರಮ್ ಭಟ್, ನವೀನ್ ಬಾಧ್ಯ, ಅಭಿಲಾಷ್, ಪ್ರಸಾದ್, ಪನ್ನಗ ಸಾಮಗ, ಅಭಿಷ್ಟ ಹೆಬ್ಬಾರ್ ಸೇವೆಯಲ್ಲಿ ಪಾಲ್ಗೊಂಡರು.
2006 ರಲ್ಲಿ ಆರಂಭವಾದ ಬೆಳ್ಕಳೆ ಚೆಂಡೆ ಬಳಗವು ಉಡುಪಿ, ಮಂತ್ರಾಲಯ, ತಿರುಪತಿ ಹಾಗೂ ರಾಜ್ಯ ಮತ್ತು ಹೊರ ರಾಜ್ಯದ ಅನೇಕ ಧಾರ್ಮಿಕ ಕ್ಷೇತ್ರಗಳಲ್ಲಿ ಚೆಂಡೆ ವಾದನ ಕಾರ್ಯಕ್ರಮ ನೀಡುತ್ತಾ ಬರುತ್ತಿದ್ದಾರೆ.
ಇದೀಗ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ನಾಡಿನಲ್ಲಿ ಜಗತ್ತಿನಾದ್ಯಂತ ಇರುವ ಕೋಟ್ಯಂತರ ಹಿಂದುಗಳ ಸ್ವಾಭಿಮಾನದ ಪ್ರತೀಕವಾಗಿ ತಲೆ ಎತ್ತಿ ನಿಂತಿರುವ ಭವ್ಯ ಶ್ರೀ ರಾಮ ಮಂದಿರದಲ್ಲಿ ಚೆಂಡೆ ವಾದನ ಸೇವೆ ನೀಡುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದಂತಾಗಿದೆ.



- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

