ಬಡಗು ತಿಟ್ಟಿನ ಪ್ರಸಿದ್ಧ ಭಾಗವತ, ರಾಜ್ಯ ಪ್ರಶಸ್ತಿ ಪುರಸ್ಕೃತ ಸುಬ್ರಹ್ಮಣ್ಯ ಧಾರೇಶ್ವರ (68) ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು.
ಹಂಗಾರಕಟ್ಟೆ ಯಕ್ಷಗಾನ ಕೇಂದ್ರದಲ್ಲಿ ಎಂ.ನಾರ್ಣಪ್ಪ ಉಪ್ಪೂರರ ಶಿಷ್ಯರಾದ ಇವರು,ಕಾಳಿಂಗ ನಾವಡರ ಒಡನಾಡಿಯಾಗಿ ರಂಗ ಪ್ರವೇಶಿಸಿ, ವಿವಿಧ ಮೇಳಗಳಲ್ಲಿ ಮುಖ್ಯವಾಗಿ ಪೆರ್ಡೂರು ಮೇಳದ ಪ್ರಧಾನ ಭಾಗವತರಾಗಿ ಒಟ್ಟೂ ಸುಮಾರು ನಾಲ್ಕುವರೆ ದಶಕಗಳ ಕಲಾ ಸೇವೆ ಗೈದಿದ್ದರು.
ತಮ್ಮ ಸುಮಧುರ ಕಂಠ,ಪರಂಪರೆಯ ಶೈಲಿ,ರಂಗ ತಂತ್ರದಿಂದ ಹಲವು ಪೌರಾಣಿಕ ಮತ್ತು ಹೊಸ ಪ್ರಸಂಗಗಳಿಗೆ ಜೀವ ತುಂಬಿದ್ದರು. ಯಕ್ಷಗಾನ ಕಲಾರಂಗ ಅವರಿಗೆ ನಾರ್ಣಪ್ಪ ಉಪ್ಪೂರರ ಪ್ರಶಸ್ತಿ ನೀಡಿ ಗೌರವಿಸಿತ್ತು.
ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು. ಅವರು ಪತ್ನಿ, ಪುತ್ರ, ಪುತ್ರಿ ಹಾಗು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಅವರ ನಿಧನಕ್ಕೆಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್,ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.ಇಂದು ಸಂಜೆ ಕಿರಿಮಂಜೇಶ್ವರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
- ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ – ಚಂಪಾಷಷ್ಠಿ ಮಹೋತ್ಸವ 27-11-2024ರಿಂದ 12-12-2024ರ ವರೆಗೆ
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ