Friday, September 20, 2024
Homeಸುದ್ದಿಸಾಂಸ್ಕೃತಿಕ ಉತ್ಸವ - ಸಿರಿಬಾಗಿಲು ಯಕ್ಷ ವೈಭವ - ಪ್ರಶಸ್ತಿ ಪ್ರದಾನ

ಸಾಂಸ್ಕೃತಿಕ ಉತ್ಸವ – ಸಿರಿಬಾಗಿಲು ಯಕ್ಷ ವೈಭವ – ಪ್ರಶಸ್ತಿ ಪ್ರದಾನ

ತೆಂಕುತಿಟ್ಟು ‘ಯಕ್ಷಗಾನ ಪಿತಾಮಹ’ ಪಾರ್ತಿಸುಬ್ಬನ ಜನ್ಮನಾಡು, ಕುಂಬ್ಳೆ ಸೀಮೆಯ ಸಿರಿಬಾಗಿಲಿನಲ್ಲಿ ಪ್ರಪ್ರಥಮ ಬಾರಿಗೆ ಹವ್ಯಾಸಿ ಕಲಾತಂಡಗಳ ಚಾರಿತ್ರಿಕ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮ ಹಾಗೂ ವಿಚಾರ ಸಂಕಿರಣ, ಭರತನಾಟ್ಯ, ಕನ್ನಡ ನಾಡಗೀತೆ ,ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು ಇದೇ ತಿಂಗಳ 17,18,19 ,20ರಂದು ಕೇರಳ ರಾಜ್ಯದ ಗಡಿನಾಡು ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಕನ್ನಡಪರ ಹಾಗೂ ಸಾಂಸ್ಕೃತಿಕ ವಲಯದ ಹಲವು ಅಧ್ಯಯನ ಯೋಗ್ಯ ಚಟುವಟಿಕೆಗಳಿಗೆ ತನ್ನನ್ನು ಅರ್ಪಿಸಿಕೊಂಡಿರುವ ಪ್ರತಿಷ್ಠಾನವು,
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ,ಕರ್ನಾಟಕ ಸರಕಾರ ಇವರ ಸಹಯೋಗದೊಂದಿಗೆ ‘ಕರ್ನಾಟಕ ಸಂಭ್ರಮ – 50 ಸವಿ ನೆನಪು -2023-24’ ಮತ್ತು
ಕಲಾಪೋಷಕರ ಸಹಕಾರದೊಂದಿಗೆ ನಡೆಯಲಿರುವುದು.

ಪರಮಪೂಜ್ಯ ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು 17ನೇ ತಾರೀಕು ಬುಧವಾರ ಬೆಳಗ್ಗೆ 10.30 ಕ್ಕೆ ಈ ಕಾರ್ಯಕ್ರಮಕ್ಕೆ ದೀಪ ಪ್ರಜ್ವಲಿಸಿ ಆಶೀರ್ವಚನ ನೀಡುವ ಮೂಲಕ ಚಾಲನೆ ನೀಡಲಿದ್ದಾರೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇವಿನಮರದ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.

ಯಕ್ಷಗಾನ ಕಲಾಪೋಷಕರು, ಸಂಘಟಕರು ಆಗಿರುವ ಹೈದರಾಬಾದಿನ ಹೋಟೆಲ್ ಉದ್ಯಮಿ ಶ್ರೀ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಶ್ರೀ ಪ್ರಕಾಶ್ ಮತ್ತೀಹಳ್ಳಿ, ಮಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀ ರಾಜೇಶ್, ಗಡಿಪ್ರದೇಶ ಪ್ರಾಧಿಕಾರದ ಸದಸ್ಯ ಎಂ. ಆರ್. ಸುಬ್ಬಯ್ಯಕಟ್ಟೆ, ಯಕ್ಷಗಾನ ಅಕಾಡೆಮಿ ಸದಸ್ಯ ಶ್ರೀ ಸತೀಶ ಅಡಪ ಸಂಕಬೈಲು ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ನಾಲ್ಕು ದಿನಗಳಲ್ಲಿ ಐದು ಜಿಲ್ಲೆಗಳಿಂದ ತೆಂಕುತಿಟ್ಟು ಹಾಗೂ ಬಡಗುತಿಟ್ಟಿನ 26 ಹವ್ಯಾಸಿ ಯಕ್ಷಗಾನ ತಂಡಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ. ಸ್ಥಳೀಯ ಯುವ ಪ್ರತಿಭೆಗಳ ಭರತನಾಟ್ಯ, ಕನ್ನಡ ಭಾವಗೀತೆಗಳ ಗಾಯನ ಈ ಕಾರ್ಯಕ್ರಮದ ಜೊತೆ ನಡೆಯಲಿದೆ.

ಹಾಗೆಯೇ 20 ನೇ ತಾರೀಕು ಶನಿವಾರದಂದು ಮಧ್ಯಾಹ್ನ 2 ಗಂಟೆಯಿಂದ ಸಿರಿಬಾಗಿಲು ಪ್ರತಿಷ್ಠಾನ ಪ್ರಕಾಶಿಸಿದ 7 ಗ್ರಂಥಗಳ ಕುರಿತಾದ ವಿಚಾರ ಸಂಕಿರಣ ನಡೆಯಲಿದೆ. ಇದರಲ್ಲಿ ಶ್ರೀಧರ ಡಿ. ಎಸ್, ರಾಧಾಕೃಷ್ಣ ಉಳಿಯತ್ತಡ್ಕ, ರಾಧಾಕೃಷ್ಣ ಕಲ್ಚರ್, ಲಕ್ಷ್ಮಿ ಮಚ್ಚಿನ, ಡಾ. ನಾಗವೇಣಿ ಮಂಚಿ, ಕುಮಾರ ಸುಬ್ರಮಣ್ಯ ಮುಳಿಯಾಲ ಮತ್ತು ರಾಘವೇಂದ್ರ ಉಡುಪ ನೇರಳೆಕಟ್ಟೆ ಪುಸ್ತಕಗಳ ಬಗ್ಗೆ ವಿಮರ್ಶೆ ನಡೆಸಿಕೊಡಲಿದ್ದಾರೆ.

ಸಮಾರೋಪ ಸಮಾರಂಭ ಸಂಜೆ 4 ಗಂಟೆಗೆ ನಡೆಯಲಿದ್ದು, ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು, ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಕೊಂಡೆಯೂರು ಮಠ ಉಪ್ಪಳ ಆಶೀರ್ವಚನ ನೀಡಲಿದ್ದಾರೆ. ಈ ಸಭೆಯ ಅಧ್ಯಕ್ಷತೆಯನ್ನು ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷರಾದ ಡಾ.ಎಂ.ಮೋಹನ್ ಆಳ್ವರವರು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಯಕ್ಷಗಾನ ಕೇಂದ್ರ ಹಂಗಾರಕಟ್ಟೆ ಐರೋಡಿ ಇದರ ಕಾರ್ಯದರ್ಶಿ ಶ್ರೀ ರಾಜಶೇಖರ ಹೆಬ್ಬಾರ್ ಐರೋಡಿ, ಶ್ರೀ ಕೆ. ಆರ್. ಆಳ್ವ ಕಂಬಾರು, ಶ್ರೀ ಟಿ. ಎಮ್. ಸತೀಶ ಬೆಂಗಳೂರು, ಅಗರಿ ಎಂಟರ್ಪ್ರೈಸಸ್ ಮಾಲಕ ಶ್ರೀ ಅಗರಿ ರಾಘವೇಂದ್ರರಾವ್, ಮಾಂಡವಿ ಮೋಟರ್ಸ್ ಮಂಗಳೂರುನ ವ್ಯವಸ್ಥಾಪಕ ಶಶಿಧರ ಕಾರಂತ , ಕನ್ನಡ ಸಾಹಿತ್ಯ ಪರಿಷತ್ತು ಗಡಿನಾಡು ಘಟಕದ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ್ ತೊಟ್ಟೆತೋಡಿ, ಕರ್ನಾಟಕ ಬ್ಯಾಂಕ್ ನ ಶ್ರೀ ಸುಜಿತ್ ಕುಮಾರ, ಪುಳ್ಕೂರು ಮಹಾದೇವ ದೇವಸ್ಥಾನದ ಅಧ್ಯಕ್ಷ ಶ್ರೀ ಶೀನ ಶೆಟ್ಟಿ ಕಜೆ ಮುಂತಾದವರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಪ್ರಸಂಗಕರ್ತ ಶ್ರೀಧರ ಡಿ.ಎಸ್, ಬಹುಭಾಷಾ ವಿದ್ವಾಂಸ ಶ್ರೀ ಕೊಕ್ಕಡ ವೆಂಕಟ್ರಮಣ ಭಟ್ ಮಂಡ್ಯ, ಗಡಿನಾಡ ಸಂಗೀತ ವಿದ್ವಾನ್ ಶ್ರೀಮತಿ ಶಕುಂತಲಾ ಕೆ. ಕುಂಚಿನಡ್ಕ ಇವರಿಗೆ ಸಿರಿ ಬಾಗಿಲು ವೆಂಕಪ್ಪಯ್ಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತದೆ. ಇವರ ಅಭಿನಂದನಾ ಭಾಷಣವನ್ನು ಹಿರಿಯ ವಿದ್ವಾಂಸ ಶ್ರೀ ಜಿ. ಕೆ. ಭಟ್ ಸೇರಾಜೆ ಯವರು ನೆರವೇರಿಸಲಿದ್ದಾರೆ. ಪ್ರತಿಷ್ಠಾನದ ಬೆಳವಣಿಗೆಗೆ ಸಹಕರಿಸಿದ ಗಣ್ಯರಿಗೆ ಗೌರವಾರ್ಪಣೆ ನಡೆಯಲಿದೆ.

ಈ ಎಲ್ಲಾ ಕಾರ್ಯಕ್ರಮಗಳಿಗೆ ಹೆಚ್ಚಿನ ರೀತಿಯಲ್ಲಿ ಕಲಾಪೋಷಕರು, ಕನ್ನಡ ಸಾಹಿತ್ಯ ಪ್ರೇಮಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಿರಿಬಾಗಿಲು ಪ್ರತಿಷ್ಠಾನದ ಅಧ್ಯಕ್ಷ, ಭಾಗವತ ರಾಮಕೃಷ್ಣ ಮಯ್ಯ ಸಿರಿಬಾಗಿಲು ಇವರು ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.

ರಾಮಕೃಷ್ಣ ಮಯ್ಯ ಸಿರಿಬಾಗಿಲು
ಯಕ್ಷಗಾನ ಭಾಗವತ, ಅದ್ಯಕ್ಷರು ಸಿರಿಬಾಗಿಲು ಪ್ರತಿಷ್ಠಾನ, ಡಾ. ಶ್ರತಕೀರ್ತಿ ರಾಜ್ ಉಜಿರೆ. ಉಪನ್ಯಾಸಕರು, ಯಕ್ಷಗಾನ ಕಲಾವಿದರು, ಕಟೀಲು ಮೇಳ, ಶಶಿಧರ ಕಾರಂತ, ಮೆನೇಜರ್, ಮಾಂಡೋವಿ ಮೋಟಾರ್ಸ್, ಹಂಪನಕಟ್ಟೆ. ಮಂಗಳೂರು ಮತ್ತು ಜಗದೀಶ ಕೆ. ಕೂಡ್ಲು. ಸದಸ್ಯರು. ಸಿರಿಬಾಗಿಲು ಪ್ರತಿಷ್ಠಾನ ಇವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

5 ಲಕ್ಷ್ಮಣ ಕುಮಾರ್ ಮರಕಡ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments