ಪುತ್ತೂರು: ಆಕಾಂಕ್ಷಾ ಚಾರಿಟೆಬಲ್ ಟ್ರಸ್ಟ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮತ್ತು ಕೋಡ್‌ಕ್ರಾಫ್ಟ್ ಟೆಕ್ನಾಲಜೀಸ್ ಅವರ ಸಂಯುಕ್ತ ಆಶ್ರಯದಲ್ಲಿ ‘ಅರಿವು ಕೇಂದ್ರ’ಗಳ ಗ್ರಂಥಪಾಲಕರಿಗಾಗಿ ಇಂಗ್ಲಿಷ್ ತರಬೇತಿ ಕಾರ್ಯಕ್ರಮವು ಪುತ್ತೂರಿನಲ್ಲಿ ನಡೆಯಿತು.
ಈ ಕಾರ್ಯಕ್ರಮದ ಮೊದಲ ಹಂತದಲ್ಲಿ 25 ಗಂಟೆಗಳ ಆನ್‌ಲೈನ್ ತರಗತಿಗಳನ್ನು ನಡೆಸಲಾಯಿತು. ಅಂತಿಮ ಹಂತವಾಗಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕಿನ ಗ್ರಂಥಪಾಲಕರಿಗಾಗಿ ಕಾರ್ಯಾಗಾರವನ್ನು ಪುತ್ತೂರು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಆಗಸ್ಟ್ 17 ಮತ್ತು 18, 2024 ರಂದು ನಡೆದ ಈ ಕಾರ್ಯಾಗಾರದಲ್ಲಿ 65 ಕ್ಕೂ ಹೆಚ್ಚು ಗ್ರಂಥಪಾಲಕರು ಭಾಗವಹಿಸಿದರು. ಪುತ್ತೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶ್ರೀ ನವೀನ್ ಭಂಡಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಗ್ರಂಥಪಾಲಕರಿಗೆ ಡಿಜಿಟಲ್ ಸಂಪನ್ಮೂಲಗಳನ್ನು ಬಳಸಿಕೊಂಡು ಇಂಗ್ಲಿಷ್ ಪಠ್ಯಶಕ್ತಿ ಅಭಿವೃದ್ದಿಪಡಿಸಲು ಸೂಚಿಸಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್ ಭಾಷೆಯ ಮಹತ್ವವನ್ನು ಅವರು ಪ್ರಸ್ತಾಪಿಸಿದರು.

ಇದೇ ಸಂದರ್ಭದಲ್ಲಿ ಬೇರೆ ತಾಲೂಕುಗಳ ಗ್ರಂಥಪಾಲಕರಿಗಾಗಿ ಮಂಗಳೂರು ಮತ್ತು ಬೆಳ್ತಂಗಡಿ ತಾಲೂಕು ಪಂಚಾಯತ್‌ಗಳ ಸಭಾಭವನಗಳಲ್ಲಿ ಕಾರ್ಯಾಗಾರಗಳನ್ನು ನಡೆಸಲಾಯಿತು.
ಈ ಕಾರ್ಯಾಗಾರವು ಮಂಗಳೂರಿನ ಕೋಡ್‌ಕ್ರಾಫ್ಟ್ ಟೆಕ್ನಾಲಜೀಸ್ ಕಂಪನಿಯ ಸಿಎಸ್ ರ್ ನಿಧಿಯ ಸಹಾಯದಿಂದ ನಡೆಯಿತು. ಆಕಾಂಕ್ಷಾ ಚಾರಿಟೆಬಲ್ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಡಾ. ಶ್ರೀಶ ಬೈಪದವು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಗ್ರಂಥಪಾಲಕರಿಗೆ ಸಂಧ್ಯಾ ಸಾವಿತ್ರಿ, ನವ್ಯಶ್ರೀ, ಕೌಶಿಕ್, ಸೀಮಾ ಲಹರಿ ಮತ್ತು ಸ್ಪೂರ್ತಿ ಲಕ್ಷ್ಮಿ ಇವರುಗಳು ತರಬೇತಿ ನೀಡಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

