ಬೆಂಗಳೂರಿನಲ್ಲಿ ಟೆಕ್ಕಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಹುಡುಗಿ ತಾನಿದ್ದ ಪೇಯಿಂಗ್ ಗೆಸ್ಟ್ ಹೌಸ್ ನ (PG) 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಳು.
ಈ ಘಟನೆ ನಡೆದದ್ದು ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ.
ಗುರುವಾರ ಸಂಜೆಯ ವೇಳೆಯಲ್ಲಿ ಘಟನೆ ನಡೆದಿದೆ. ವೈಟ್‌ಫೀಲ್ಡ್ ಪ್ರಶಾಂತ್ ಲೇಔಟ್‌ನ ಪಿಜಿಯ ಐದನೇ ಹಂತದಿಂದ ಬಿದ್ದು ಸಾವನ್ನಪ್ಪಿದ್ದಾಳೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಈ ಯುವತಿ ಆಂಧ್ರಪ್ರದೇಶದ ಕಡಪ ಮೂಲದವಳು. ಈಕೆಯ ಹೆಸರು ಗೌತಮಿ. ಆತ್ಮಹತ್ಯೆ ಮಾಡಿಕೊಂಡ ಯುವತಿ ಗೌತಮಿ ನಗರದ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದಳು,
ಆತ್ಮಹತ್ಯೆಗೂ ಮುನ್ನ ಮುನ್ನ ಆಕೆ ಬರೆದ ಡೆತ್‌ನೋಟ್ ಪೊಲೀಸರಿಗೆ ಲಭ್ಯವಾಗಿದೆ., ಅದರಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಮೃತದೇಹವನ್ನು ಪೋಸ್ಟ್ ಮಾರ್ಟಂ ಮಾಡದೆ, ತಂದೆ ತಾಯಿಗೆ ಹಸ್ತಾಂತರ ಮಾಡಿ ಅಂತ ಬರೆದಿದ್ದಾಳೆ.
ಕೊನೆಯಲ್ಲಿ ಹೆತ್ತವರಿಗೆ ‘ಸಾರಿ ಕ್ಷಮಿಸಿ’ ಎಂದು ಬರೆದಿದ್ದಾಳೆ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ನಡೆಯುತ್ತಿದೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

