ಸರ್ಪಂಗಳ ಯಕ್ಷೋತ್ಸವ ಕಾರ್ಯಕ್ರಮ
ಪ್ರತಿ ವರ್ಷದಂತೆ ಈ ಬಾರಿಯ ಸರ್ಪಂಗಳ ಯಕ್ಷೋತ್ಸವ ಕಾರ್ಯಕ್ರಮವು ಅಕ್ಟೋಬರ್ 27, 2024 ರಂದು ಸಂಜೆ 4.00 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್ಮೆಂಟ್, ಟ್ರೈನಿಂಗ್ & ರಿಸರ್ಚ್ ಸೆಂಟರ್ನಲ್ಲಿ ಜರಗಲಿದೆ.
ಈ ಸಂದರ್ಭದಲ್ಲಿ ಸರ್ಪಂಗಳ ಪ್ರಶಸ್ತಿಯನ್ನು ಕಟೀಲು ಮೇಳದ ಭಾಗವತರಾದ ಶ್ರೀ ಪದ್ಯಾಣ ಗೋವಿಂದ ಭಟ್ ಹಾಗೂ ಸರ್ಪಂಗಳ ಪುರಸ್ಕಾರವನ್ನು ನೇಪಥ್ಯ ಕಲಾವಿದರಾಗಿ ಕಟೀಲು ಮೇಳದಲ್ಲಿ ಸೇವೆ ಸಲ್ಲಿಸುತ್ತಿರುವ ಗೋವಿಂದ ನಾಯ್ಕ್ ಕಾಟುಕುಕ್ಕೆ ಇವರಿಗೆ ಪ್ರದಾನ ಮಾಡಲಾಗುವುದು.
ಬಳಿಕ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ಕನಕಾಂಗಿ ಕಲ್ಯಾಣ ಪ್ರಸ್ತುತಗೊಳ್ಳಲಿದೆ ಎಂದು ಸರ್ಪಂಗಳ ಯಕ್ಷೋತ್ಸವದ ಪ್ರವರ್ತಕರಾದ ಡಾ. ಶೈಲಜಾ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು
- ಕಾಸರಗೋಡಿನ ಮಸೀದಿ ಪರಿಸರದ ಮಣ್ಣು ತೆಗೆದ ಜೆಸಿಬಿಗೆ 45 ಲಕ್ಷ ದಂಡ; ಬಡ ಕುಟುಂಬ ಸಂಕಷ್ಟದಲ್ಲಿ – ಕಬ್ರಿಸ್ತಾನ್ ಭೂಮಿಯ ಉಸ್ತುವಾರಿ ಮಸೀದಿ ಅಧಿಕಾರಿಗಳಿಗೆ ಶಿಕ್ಷೆ ಇಲ್ಲ