ಸಾಂದರ್ಭಿಕ ಚಿತ್ರ
ಕಾಸರಗೋಡು: ನೀಲೇಶ್ವರದ ಅಂಜೂತಂಬಳಂ ವೀರೇರ್ಕಾವು ತೆಯ್ಯಂಕೆಟ್ಟು ಮಹೋತ್ಸವದ ವೇಳೆ ಪಟಾಕಿ ಸಂಗ್ರಹ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಹಲವರು ಗಾಯಗೊಂಡಿದ್ದಾರೆ.
ಹಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಮೂವಳಂಕುಳಿ ಚಾಮುಂಡಿ ತೆಯ್ಯಂನ ಕುಳಿಚು ತೊಟ್ಟಂ ಆಚರಣೆಯ ವೇಳೆ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ.
ಪಟಾಕಿಯ ಕಿಡಿಗಳು ಬೆಂಕಿ ಹೊತ್ತಿಕೊಂಡಿವೆ ಎಂದು ನಂಬಲಾಗಿದೆ.
ಗಾಯಾಳುಗಳನ್ನು ಕಾಞಂಗಾಡ್ ಜಿಲ್ಲಾಸ್ಪತ್ರೆ ಮತ್ತು ನೀಲೇಶ್ವರಂ ಮತ್ತು ಕಾಞಂಗಾಡ್‌ನ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಇದರಲ್ಲಿ ಗಂಭೀರವಾಗಿ ಗಾಯಗೊಂಡ ಮೂವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲವು ಮಂದಿ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಲಾಗಿದೆ ಎಂದು ತಿಳಿದುಬಂದಿದೆ.