ಮಹಿಳಾ ಪೊಲೀಸ್ ಪೇದೆಯೊಬ್ಬರನ್ನು ಆಕೆಯ ಸಹೋದರ ಪರಮೇಶ್ ಹತ್ಯೆಗೈದಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಇಬ್ರಾಹಿಂಪಟ್ಟಣಂ ಮಂಡಲದ ರಾಯ್ಪೋಲ್ ಗ್ರಾಮದ ಬಳಿ ಸೋಮವಾರ ಮರ್ಯಾದಾ ಹತ್ಯೆಯ ಶಂಕಿತ ಪ್ರಕರಣದಲ್ಲಿ ಮಹಿಳಾ ಪೊಲೀಸ್ ಪೇದೆಯೊಬ್ಬರನ್ನು ಆಕೆಯ ಸಹೋದರ ಬರ್ಬರವಾಗಿ ಕೊಚ್ಚಿ ಕೊಂದಿದ್ದಾನೆ.
ಮೃತ ನಾಗಮಣಿ ಹಯಾತ್‌ನಗರ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದು, ಹದಿನೈದು ದಿನಗಳ ಹಿಂದೆ ಅನ್ಯ ಜಾತಿಯ ಶ್ರೀಕಾಂತ್ ಎಂಬಾತನನ್ನು ಮನೆಯವರ ತೀವ್ರ ವಿರೋಧದ ನಡುವೆಯೂ ಮದುವೆಯಾಗಿದ್ದಳು. ಅಂತರ್ಜಾತಿ ವಿವಾಹಕ್ಕೆ ಆಕೆಯ ಮನೆಯವರು ಒಪ್ಪಿರಲಿಲ್ಲ.
ನಾಗಮಣಿ ರಾಯಪೋಲ್‌ನಿಂದ ಮಣ್ಣೇಗೌಡ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಈ ಕೊಲೆ ನಡೆದಿದೆ. ಆಕೆಯ ಸಹೋದರ ಪರಮೇಶ್ ಆಕೆಯ ಸ್ಕೂಟರ್ ಗೆ ತನ್ನ ಕಾರನಿಂದ ಗುದ್ದಿ ಬೀಳಿಸಿದ್ದಾನೆ.
ಆಕೆ ಬಿದ್ದಾಗ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಆಕೆ ರಕ್ತದ ಮಡುವಿನಲ್ಲಿ ಬಿದ್ದು ವಿಲವಿಲ ಒದ್ದಾಡಿದ್ದಾಳೆ. ಗಂಭೀರ ಗಾಯಗೊಂಡ ನಾಗಮಣಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ನಾಗಮಣಿಯ ಸಾವನ್ನು ದೃಢಪಡಿಸಿದರು.
ನಾಗಮಣಿ ಅವರು ಶ್ರೀಕಾಂತ್ ಅವರನ್ನು ಮದುವೆಯಾಗುವ ಮೂಲಕ ತನ್ನ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಇದು ಕುಟುಂಬ ಸದಸ್ಯರ ವಿರೋಧ, ಕೋಪಕ್ಕೆ ಕಾರಣವಾಯಿತು ಎಂದು ತಿಳಿದುಬಂದಿದೆ.
ದಾಳಿ ಬಳಿಕ ಸ್ಥಳದಿಂದ ಪರಾರಿಯಾಗಿರುವ ಆರೋಪಿಯನ್ನು ಬಂಧಿಸಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಆಸ್ತಿ ವಿವಾದದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಗುಂಡಿನ ದಾಳಿ – ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ
- ಪತ್ನಿ ಹತ್ಯೆ ಪ್ರಕರಣ, ಯುಎಸ್ಎ ಯಲ್ಲಿ ಪತಿ ನರೇಶ್ ಭಟ್ ಬಂಧನ – ಗಂಡ ಯಾವಾಗ ಮರುವಿವಾಹ ಆಗಬಹುದು ಎಂದು ಗೂಗಲ್ ನಲ್ಲಿ ಸರ್ಚ್ ಮಾಡಿದ್ದ ಆರೋಪಿ
- ವಿಟ್ಲದ ರಿಕ್ಷಾ ಚಾಲಕ ನಾಪತ್ತೆ – ಉಪ್ಪಿನಂಗಡಿಯಲ್ಲಿ ನಿಂತುಕೊಂಡಿರುವ ಖಾಲಿ ರಿಕ್ಷಾ
- ಯಕ್ಷಗಾನದ ಹಿರಿಯ ಭಾಗವತ ನಿಧನ
- ಹವ್ಯಾಸಿ ಯಕ್ಷಗಾನ ತಂಡಗಳ ಬಹುದೊಡ್ಡ ಸಮಾಗಮ