ಕುಕ್ಕೆ ಸುಬ್ರಹ್ಮಣ್ಯ: ಇತಿಹಾಸ ಪ್ರಸಿದ್ಧ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಾರೀ ಮಳೆಯಾಗಿದೆ ಎಂದು ವರದಿಯಾಗಿದೆ.
ಇಲ್ಲಿನ ಇತಿಹಾಸ ಪ್ರಸಿದ್ಧ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಪರಿಸರದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಲಿದೆ ಎಂದು ತಿಳಿದುಬಂದಿದೆ.

ಕುಕ್ಕೆಯ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಮಗ್ಗುಲಲ್ಲಿ ಹರಿಯುತ್ತಿರುವ ‘ದರ್ಪಣ ತೀರ್ಥ’ ಹೊಳೆಯು ಉಕ್ಕಿ ಹರಿಯುತ್ತಿದ್ದು ನೀರು ಆದಿ ಸುಬ್ರಹ್ಮಣ್ಯ ದೇವಸ್ಥಾನದ ಒಳಾಂಗಣಕ್ಕೆ ನುಗ್ಗಿದ ಬಗ್ಗೆ ವರದಿಯಾಗಿದೆ.

ದೇವಳದ ಒಳ ಅಂಗಣದಲ್ಲಿ ನೀರು ನುಗ್ಗುತ್ತಿರುವುದನ್ನು ಚಿತ್ರದಲ್ಲಿ ಕಾಣಬಹುದು.

