ಕೊರೋನಾ ಪೀಡಿತರಾಗಿ ಗಂಭೀರ ಪರಿಸ್ಥಿತಿಯಲ್ಲಿ ಚೆನ್ನೈಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಅದ್ಭುತ ಸುಧಾರಣೆ ಕಂಡುಬಂದಿದೆ. ಅವರೀಗ ಕೊರೋನಾ ಮುಕ್ತರಾಗಿದ್ದಾರೆ. ಈ ಮಾಹಿತಿಯನ್ನು ಅವರ ಪುತ್ರ ಎಸ್. ಪಿ. ಚರಣ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅವರಿಗೆ ಕೊರೋನಾ ವರದಿಯಲ್ಲಿ ನೆಗೆಟಿವ್ ಫಲಿತಾಂಶ ಬಂದಿದ್ದರೂ ಅವರ ಶ್ವಾಸಕೋಶ ಮತ್ತೆ ಮೊದಲಿನ ಸ್ಥಿತಿಗೆ ಬರುವ ವರೆಗೂ ಅವರು ತೀವ್ರ ನಿಗಾ ಘಟಕದಲ್ಲಿಯೇ ಚಿಕಿತ್ಸೆ ನೀಡಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಅವರೀಗ ಎಲ್ಲರೊಂದಿಗೂ ಮಾತನಾಡಲು ಪ್ರಾರಂಭಿಸಿದ್ದಾರೆ. ಹಾಗೂ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಲೂ ತೊಡಗಿದ್ದಾರೆ. ಅವರು ಆರೋಗ್ಯವಂತರಾಗಲು ಪ್ರಾರ್ಥಿಸಿದ ಎಲ್ಲರಿಗೂ ಕುಟುಂಬ ಧನ್ಯವಾದಗಳನ್ನು ಅರ್ಪಿಸಿದೆ.
Breaking News – ಎಸ್. ಪಿ. ಬಾಲಸುಬ್ರಹ್ಮಣ್ಯಂ ಚೇತರಿಕೆ. ಶೀಘ್ರವೇ ಡಿಸ್ಚಾರ್ಜ್?
RELATED ARTICLES
