ಯಕ್ಷಗಾನ ಪ್ರಸಂಗಕರ್ತ, ಕಲಾವಿದ ಹಾಗೂ ವೈದ್ಯ ಡಾ. ಪಟ್ಟಾಜೆ ಗಣೇಶ ಭಟ್ ಇಂದು ನಿಧನರಾಗಿದ್ದಾರೆ. ಅವರು ಕಾವು ಸಮೀಪದ ಪಟ್ಟಾಜೆಯ ತಮ್ಮ ಸ್ವಗೃಹದಲ್ಲಿ ಇಂದು ಅಸ್ತಂಗತರಾದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಹವ್ಯಾಸಿ ವೇಷಧಾರಿಯಾಗಿಯೂ ತಾಳಮದ್ದಳೆ ಅರ್ಥಧಾರಿಯಾಗಿಯೂ ಯಕ್ಷಗಾನ ಕ್ಷೇತ್ರದಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಯಕ್ಷಗಾನ ಪ್ರಸಂಗಗಳನ್ನು ಬರೆಯುವಲ್ಲಿ ತೊಡಗಿಸಿಕೊಂಡಿದ್ದ ಡಾ. ಪಟ್ಟಾಜೆ ಗಣೇಶ ಭಟ್ಟರು ಹಲವಾರು ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಅವರು ರಚಿಸಿದ್ದ ಹನ್ನೆರಡು ಪ್ರಸಂಗಗಳನ್ನು ಒಳಗೊಂಡ ಸಂಪುಟವೇ ‘ ಯಕ್ಷ ದ್ವಾದಶಾಮೃತಮ್ ಪ್ರಸಂಗಮಾಲಿಕಾ’ ಎಂಬ ಪುಸ್ತಕವು ಕಳೆದ ವರ್ಷ ಬಿಡುಗಡೆಗೊಂಡಿದ್ದುದನ್ನು ನಾವಿಲ್ಲಿ ಸ್ಮರಿಸಿಕೊಳ್ಳಬಹುದು.
ಒಳ್ಳೆಯ ವೈದ್ಯರಾಗಿಯೂ ಹೆಸರು ಗಳಿಸಿದ್ದ ಶ್ರೀಯುತರು ಸಾರ್ವಜನಿಕ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಜನಾನುರಾಗಿಯಾಗಿದ್ದ ಶ್ರೀ ಪಟ್ಟಾಜೆ ಗಣೇಶ ಭಟ್ಟರು ತಮ್ಮ ಪತ್ನಿ, ಮಕ್ಕಳು, ಅಪಾರ ಸ್ನೇಹಿತ, ಬಂಧುವರ್ಗದವರನ್ನೂ ಕಲಾಭಿಮಾನಿಗಳನ್ನೂ ಅಗಲಿದ್ದಾರೆ.