ಎಡನೀರು ಶ್ರೀ ಮಠದ ಅಭಿಮಾನಿಗಳೂ ಶಿಷ್ಯರೂ ಆಗಿರುವ ಯಕ್ಷಗಾನದ ಹಿರಿಯ ಖ್ಯಾತ ಸ್ತ್ರೀಪಾತ್ರಧಾರಿ ಶ್ರೀ ಪಾತಾಳ ವೆಂಕಟ್ರಮಣ ಭಟ್ಟರು ತನ್ನ ಕಲಾಸೇವೆಯ ನೆನಪಿಗಾಗಿ, ಎಡನೀರಿನಲ್ಲಿ ‘ಶ್ರೀ ಪಾತಾಳ ಯಕ್ಷ ಪ್ರತಿಷ್ಠಾನ’ವನ್ನು ರೂಪಿಸಿ ವರ್ಷಂಪ್ರತಿ ಹಿರಿಯ ಕಲಾವಿದರನ್ನು ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಕಲಾಭಿಮಾನಿಗಳಿಗೆಲ್ಲರಿಗೂ ತಿಳಿದಿರುವ ವಿಚಾರ.
ಪಾತಾಳ ಪ್ರಶಸ್ತಿಯ ದಶಮಾನೋತ್ಸವದ ಸಂದರ್ಭದಲ್ಲಿ ಉಪಾಯನ ಎಂಬ ಹೊತ್ತಗೆಯು ಪ್ರಕಟವಾಗಿತ್ತು. 2014ರಲ್ಲಿ ಪ್ರಕಟವಾದ ಈ ಪುಸ್ತಕದ ಪ್ರಕಾಶಕರು ‘ಶ್ರೀ ಪಾತಾಳ ಯಕ್ಷ ಪ್ರತಿಷ್ಠಾನ’ ಎಡನೀರು. ಸಂಪಾದಕರು ಶ್ರೀ ನಾ. ಕಾರಂತ ಪೆರಾಜೆ. ಮೊದಲಿಗೆ ಎಡನೀರು ಮಠಾಧೀಶ ಶ್ರೀ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರ ಅನುಗ್ರಹ ಸಂದೇಶವನ್ನು ನೀಡಲಾಗಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
‘ಶ್ರೀ ಪಾತಾಳ ಯಕ್ಷ ಪ್ರತಿಷ್ಠಾನ’ದ ಅಧ್ಯಕ್ಷರಾದ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಅವರು ‘ಶುಭ ಒಸಗೆ’ ಎಂಬ ತಮ್ಮ ಬರಹದಲ್ಲಿ ಅನಿಸಿಕೆಗಳನ್ನು ವ್ಯಕ್ತಪಡಿಸಿರುತ್ತಾರೆ. ಸಂಪಾದಕ ಶ್ರೀ ನಾ. ಕಾರಂತ ಅವರು ‘ಹತ್ತರ ಹಸಿತ’ ಎಂಬ ಶೀರ್ಷಿಕೆಯಡಿ ಲೇಖನವನ್ನು ಬರೆದಿರುತ್ತಾರೆ. ಬಳಿಕ ಡಾ. ಬಿ. ಎನ್. ಮಹಾಲಿಂಗ ಭಟ್ ಅವರು ಬರೆದ ‘ಶ್ರೀ ಪಾತಾಳ ಯಕ್ಷ ಪ್ರತಿಷ್ಠಾನ-ದಶಕದ ಹಾದಿ’ ಎಂಬ ಲೇಖನವನ್ನು ನೀಡಲಾಗಿದೆ.
‘ಉಪಾಯನ’ ಎಂಬ ಈ ಪುಸ್ತಕದಲ್ಲಿ 2005ರಿಂದ ತೊಡಗಿ 2014ರ ವರೆಗೆ ಪಾತಾಳ ಪ್ರಶಸ್ತಿಯನ್ನು ಪಡೆದ ಹಿರಿಯ, ಖ್ಯಾತ ಕಲಾವಿದರ ಬಗೆಗೆ ಮಾಹಿತಿಗಳನ್ನು ನೀಡಲಾಗಿದೆ. ಪಾತಾಳ ಪ್ರಶಸ್ತಿಗೆ ಭಾಜನರಾದ ಕಲಾವಿದರು ಕಟೀಲು ಪುರುಷೋತ್ತಮ ಭಟ್, ಕಡಬ ಸಾಂತಪ್ಪ, ಪೆರುವಡಿ ನಾರಾಯಣ ಭಟ್, ಕೊಡಕ್ಕಲ್ಲು ಗೋಪಾಲಕೃಷ್ಣ ಭಟ್, ಕುಡಾನ ಗೋಪಾಲಕೃಷ್ಣ ಭಟ್, ಮಾರ್ಗೋಳಿ ಗೋವಿಂದ ಸೇರಿಗಾರ್, ಎಂ,ಕೆ.ರಮೇಶ ಆಚಾರ್ಯ, ಕೊಕ್ಕಡ ಈಶ್ವರ ಭಟ್, ವಿಠಲ ಮಾಸ್ತರ್ ಮತ್ತು ಭಾಸ್ಕರ ಜೋಶಿ ಶಿರಳಗಿ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಬಳಿಕ ‘ಯಕ್ಷ ಶಾಂತಲೆಯ ಅಂತರಂಗ’ ಮತ್ತು ‘ಅಂತರ್ಮುಖಿ ಪಾತಾಳ’ ಎಂಬ ಬರಹಗಳನ್ನು ನೀಡಲಾಗಿದೆ. ಬರೆದವರು ಶ್ರೀ ನಾ.ಕಾರಂತ ಪೆರಾಜೆ ಮತ್ತು ಶ್ರೀ ಮುಳಿಯ ಶಂಕರ ಭಟ್ ಅವರುಗಳು.