ಬೆಂಗಳೂರಿನ ಹೆಸರಾಂತ ತಂಡವಾದ ಯಕ್ಷಕಲಾ ಅಕಾಡೆಮಿಯು ಇದೀಗ ಯಕ್ಷಗಾನ ಉತ್ಸವವನ್ನು ಹಮ್ಮಿಕೊಂಡಿದೆ. ಇದೇ ತಿಂಗಳ 15 ರ ಸಂಜೆ 6.30 ಕ್ಕೆ ಗುಂಡ್ಮಿ ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ನಡೆಯಲಿದೆ.
ಅಂದು ಮುಖ್ಯ ಅಭ್ಯಾಗತರಾಗಿ, ರಾಷ್ಟ್ರೀಯ, ಅಂತರರಾಷ್ಟ್ರೀಯ ಮನ್ನಣೆ ಗಳಿಸಿದ ನಟ ಗೋಪಾಲಕೃಷ್ಣ ನಾಯರಿ ಹಾಗೂ ವೃತ್ತಿಯಲ್ಲಿ ವೈದ್ಯರಾದರೂ ಕೂಡಾ, ಸಾಹಿತ್ಯದಲ್ಲಿ ಅಭಿರುಚಿಯನ್ನು ಹೊಂದಿ, ಕಲಾಕ್ಷೇತ್ರದಲ್ಲಿ ಸಾಕಷ್ಟು ಪಳಗಿರುವ ಬೆಂಗಳೂರಿನ ಶೇಖರ್ ಹಾಸ್ಪಿಟಲಿನ ಸಂಸ್ಥಾಪಕ ನಿರ್ದೇಶಕರಾಗಿರುವ ಡಾ. ಪಿ.ವಿ.ಐತಾಳರು, ಹಾಗೂ ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದ ಸಕ್ರಿಯ ಕಾರ್ಯದರ್ಶಿಯೂ , ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯರೂ ಆದ ಶ್ರೀ ರಾಜಶೇಖರ್ ಹೆಬ್ಬಾರ್ ಅವರು ಪಾಲುಗೊಳ್ಳಲಿದ್ದಾರೆ.
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
ತದನಂತರ ತಂಡದ ಕಲಾವಿದರಿಂದ ‘ಭೀಷ್ಮ ಪ್ರತಿಜ್ಞೆ’ ಎನ್ನುವ ಕಥಾನಕವು ಪ್ರದರ್ಶನಗೊಳ್ಳಲಿದೆ ಎಂದು ಯಕ್ಷಗಾನ ಗುರುಗಳಾದ ಶ್ರೀ ಕೃಷ್ಣಮೂರ್ತಿ ತುಂಗರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.