Friday, November 22, 2024
Homeಸುದ್ದಿಜಿಲ್ಲೆ24ನೆಯ 'ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ'ದ ಅಧ್ಯಕ್ಷರಾಗಿ ಡಾ. ಎಂ. ಪ್ರಭಾಕರ ಜೋಶಿ ಆಯ್ಕೆ

24ನೆಯ ‘ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ’ದ ಅಧ್ಯಕ್ಷರಾಗಿ ಡಾ. ಎಂ. ಪ್ರಭಾಕರ ಜೋಶಿ ಆಯ್ಕೆ

24ನೆಯ ‘ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ’ದ ಅಧ್ಯಕ್ಷರಾಗಿ ನಮ್ಮೆಲ್ಲರ ನೆಚ್ಚಿನ ಡಾ. ಎಂ. ಪ್ರಭಾಕರ ಜೋಶಿಯವರು ಆಯ್ಕೆಯಾಗಿದ್ದಾರೆ.  24ನೆಯ ‘ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ’ವು ಫೆಬ್ರವರಿ 12,13,14 ಈ ಮೂರು ದಿನಗಳಲ್ಲಿ ಮಂಗಳೂರು ಕೊಡಿಯಾಲಬೈಲಿನ ಶಾರದಾ ವಿದ್ಯಾಲಯದಲ್ಲಿ ನಡೆಯಲಿದೆ. 

ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾದ ಡಾ. ಪ್ರಭಾಕರ ಜೋಶಿಯವರು ಕಲಾವಿದನಾಗಿ ಪ್ರಸಿದ್ಧರಾದುದು ಮಾತ್ರವಲ್ಲದೆ ಸಾಹಿತ್ಯಲೋಕದ ಒಂದು ವಿಸ್ಮಯವಾಗಿ ಗೋಚರಿಸುತ್ತಾರೆ.  ಯಕ್ಷಗಾನ ಲೋಕ ಈವರೆಗೆ ಕಂಡ ವಿದ್ವಾಂಸರಲ್ಲಿ ಡಾ. ಪ್ರಭಾಕರ ಜೋಶಿಯವರು ಅತಿ ವಿಶಿಷ್ಟ ಸ್ಥಾನದಲ್ಲಿ ನಿಲ್ಲುತ್ತಾರೆ. ಯಕ್ಷಗಾನ ಮಾತ್ರವಲ್ಲ. ವೇದ, ಪುರಾಣ,  ಆಧುನಿಕ ಪ್ರಪಂಚದ ಆಗುಹೋಗುಗಳು, ತತ್ವಶಾಸ್ತ್ರ ಹೀಗೆ ಯಾವುದನ್ನೂ ಕೇಳಿದರೂ ಅದು ಹೀಗೆಯೇ ಎಂದು ಅವರು ಹೇಳಬಲ್ಲರು. 

ತಾನು ಭೋದಿಸುತ್ತಿದ್ದ ವಾಣಿಜ್ಯಶಾಸ್ತ್ರದ ಉಪನ್ಯಾಸಕನಾಗಿ, ತಾಳಮದ್ದಳೆ ಅರ್ಥಧಾರಿಯಾಗಿ, ಯಕ್ಷಗಾನ ವಿದ್ವಾಂಸನಾಗಿ, ಕಾಲೇಜಿನ ಆಡಳಿತಾತ್ಮಕ ಹುದ್ದೆಯ ಪ್ರಾಂಶುಪಾಲನಾಗಿ, ಪ್ರಬುದ್ಧ ಲೇಖಕನಾಗಿ, ವಿಮರ್ಶಕನಾಗಿ, ಶೋಧನೆಯ ದೃಷ್ಟಿಯುಳ್ಳ ಸಂಶೋಧಕನಾಗಿ, ಅಂಕಣಕಾರನಾಗಿ, ಕಲಾವಿದನಾಗಿ, ಭಾಷಣಕಾರನಾಗಿ, ಅಪ್ರತಿಮ ವಾಕ್ಪಟುವಾಗಿ, ತತ್ವಶಾಸ್ತ್ರಜ್ಞನಾಗಿ, ಕವಿಯಾಗಿ, ನೂರಾರು ಕೃತಿಗಳು ಪ್ರಕಟಗೊಳ್ಳಲು ಕಾರಣರಾದ ಸಂಪಾದಕನಾಗಿ ಹೀಗೆ ಜೋಶಿಯವರು ಕೈ ಆಡಿಸದ ಕ್ಷೇತ್ರವಿಲ್ಲ.ಸಮ್ಮೇಳಾನಧ್ಯಕ್ಷರಾಗಿ ಜೋಶಿಯವರ ಆಯ್ಕೆಯಾದುದು ಸರ್ವರ ಮೆಚ್ಚುಗೆಯನ್ನು ಗಳಿಸಿದೆ ಮತ್ತು ಇದೊಂದು ಅರ್ಹವಾದ ಆಯ್ಕೆ. ಮಾತ್ರವಲ್ಲದೆ ಯಕ್ಷಗಾನ ಕ್ಷೇತ್ರಕ್ಕೂ ಹೆಮ್ಮೆಯನ್ನು ತಂದಿದೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments