ರವಿವಾರ ಕರ್ನಾಟಕ ರಾಜಧಾನಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅದ್ಧೂರಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2018 ನೇ ಸಾಲಿನ ಪುಸ್ತಕ ಗೌರವ ಪ್ರಶಸ್ತಿಯನ್ನು ಶ್ರೀಮತಿ ರಾಜಶ್ರೀ ಟಿ ರೈ ಪೆರ್ಲ ಇವರಿಗೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದರು ಅರವಿಂದ ಲಿಂಬಾವಳಿ ಮತ್ತು ಸಚಿವರಾದ ಎಸ್ ಅಂಗಾರ ಅವರು ಗಣ್ಯರ ಉಪಸ್ಥಿತಿಯಲ್ಲಿ ಪ್ರದಾನ ಮಾಡಿದರು.
ವರ್ಷದ ಅತ್ಯುತ್ತಮ ತುಳು ಕಾದಂಬರಿಯಾಗಿ ರಾಜಶ್ರೀ ಟಿ ರೈ ಪೆರ್ಲ ಅವರ “ಕೊಂಬು” ಕಾದಂಬರಿ ಪ್ರಶಸ್ತಿಗೆ ಪಾತ್ರವಾಗಿದೆ. ಕಲ್ಲಡ್ಕ ಪ್ರಭಾಕರ ಭಟ್, ಉಡುಪಿ ಪೇಜಾವರ ಮಠದ ಪರಮ ಪೂಜ್ಯ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್ ಸಾರ್, ಕಾಂತಿ ಶೆಟ್ಟಿ ಮತ್ತು ಅಕಾಡೆಮಿಯ ಸದಸ್ಯರು ಮತ್ತಿತರು ಉಪಸ್ಥಿತರಿದ್ದರು.
ಪ್ರಶಸ್ತಿಯು 25 ಸಾವಿರ ನಗದು, ಪ್ರಶಸ್ತಿ ಫಲಕ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ರಾಜಶ್ರೀ ಟಿ ರೈ ಪೆರ್ಲ ಅವರ ಯಕ್ಷಗಾನ ಕಲಾವಿದರ ಜೀವನಾಧರಿತ ತುಳು ಕಾದಂಬರಿ “ಚೌಕಿ” ಪನಿಯಾಡಿ ಪ್ರಶಸ್ತಿ ಪಡೆದುಕೊಂಡಿತ್ತು.
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು
- ಕಾಸರಗೋಡಿನ ಮಸೀದಿ ಪರಿಸರದ ಮಣ್ಣು ತೆಗೆದ ಜೆಸಿಬಿಗೆ 45 ಲಕ್ಷ ದಂಡ; ಬಡ ಕುಟುಂಬ ಸಂಕಷ್ಟದಲ್ಲಿ – ಕಬ್ರಿಸ್ತಾನ್ ಭೂಮಿಯ ಉಸ್ತುವಾರಿ ಮಸೀದಿ ಅಧಿಕಾರಿಗಳಿಗೆ ಶಿಕ್ಷೆ ಇಲ್ಲ