ಯಕ್ಷಗಾನದ ಶ್ರೇಷ್ಠ ಕಲಾಸಾಧಕರಾದ ಕೋಳ್ಯೂರಿಗೆ ತೊಂಭತ್ತು ತುಂಬಿದ ಶುಭಾವಸರದಲ್ಲಿ ಉಡುಪಿಯ ಯಕ್ಷಗಾನ ಕಲಾರಂಗ ಆಯೋಜಿಸಿದ್ದ ಕೋಳ್ಯೂರು ವೈಭವದ ಉದ್ಘಾಟನಾ ಸಮಾರಂಭ 14-10-2021ರಂದು ಶ್ರೀಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಸಂಪನ್ನಗೊಂಡಿತು.
ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಒಂದು ತಿಂಗಳ ಪರ್ಯಂತ ನಡೆಯಲಿರುವ ಕಾರ್ಯಕ್ರಮಗಳ ಮತ್ತು ಕೋಳ್ಯೂರರ ಕುರಿತು ಸಮಗ್ರ ಪರಿಚಯ ಒಳಗೊಂಡಿರುವ ‘ಕ್ವೀನ್ ಆಫ್ ಯಕ್ಷಗಾನ’ ಜಾಲತಾಣವನ್ನು ಉದ್ಘಾಟಿಸಿದರು. ನಾವು ಎಲ್ಲವನ್ನೂ ಸರಕಾರದಿಂದ ನಿರೀಕ್ಷಿಸುವುದು ಸರಿಯಲ್ಲ. ಕಲೆ, ಕಲಾವಿದರ ಕ್ಷೇಮ ಚಿಂತನೆಯು ಸೇರಿದಂತೆ ಯಕ್ಷಗಾನ ಕಲಾರಂಗ ಮಾಡುತ್ತಿರುವ ಸಮಾಜಮುಖಿ ಕಾರ್ಯಗಳು ಸಂಘಟನೆಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.
ರಂಗದ ಮೇಲೆ ರಾಣಿಯಾಗಿ ಮೆರೆದ ಕೋಳ್ಯೂರರು ನಿಜ ಬದುಕಿನಲ್ಲಿ ನಿಗರ್ವಿಯಾಗಿ ಎಲ್ಲರೊಂದಿಗೆ ಆತ್ಮೀಯತೆಯಿಂದಿರುವುದು ಅನುಕರಣೀಯವಾದ ನಡವಳಿಕೆ. ಎಲ್ಲ ಪ್ರತಿಕೂಲಗಳ ನಡುವೆ ಏಳು ದಶಕಗಳ ಕಾಲ ನಿರಂತರವಾಗಿ ಯಕ್ಷಗಾನ ಕ್ಷೇತ್ರದಲ್ಲಿ ಕಲಾಸೇವೆ ಮಾಡುತ್ತಾ ಬಂದ ಕೊಳ್ಯೂರರ ಕಲಾತಪಸ್ಸು ಈಗಿನ ಕಲಾವಿದರಿಗೆ ಅನುಸರಣೀಯವಾದುದಾಗಿದೆ. ವೆಬ್‌ಸೈಟ್ ನಿರ್ಮಾಣದ ಮೂಲಕ ಅವರ ಕಲಾಸಾಧನೆ ಶಾಶ್ವತವಾಗಿ ಉಳಿಯುವಂತಾದುದು ಸ್ತುತ್ಯರ್ಹ ಕಾರ್ಯ ಎಂದು ನುಡಿದು, ಶ್ರೀ ಮಂಜುನಾಥ ಸ್ವಾಮಿಯ ಕೃಪೆ ಇರಲೆಂದು ಶುಭ ಹಾರೈಸಿದರು.

ಶ್ರೀಕ್ಷೇತ್ರದ ವತಿಯಿಂದ ಕೋಳ್ಯೂರಿಗೆ ಶಾಲು ಸ್ಮರಣಿಕೆ ನೀಡಿ ಗೌರವಿಸಿದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಉಪಾಧ್ಯಕ್ಷರಾದ ಪಿ.ಕಿಶನ್ ಹೆಗ್ಡೆ ಹಾಗೂ ವಿ.ಜಿ.ಶೆಟ್ಟಿ ಹೆಗ್ಗಡೆಯವರಿಗೆ ಫಲಪುಷ್ಪ ಸಮರ್ಪಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದ ಕಾರ್ಯಕ್ರಮದ ಕೊನೆಗೆ ಜತೆಕಾರ್ಯದರ್ಶಿ ಪ್ರೊ.ನಾರಾಯಣ ಎಂ. ಹೆಗಡೆ ವಂದನಾರ್ಪಣೆಗೈದರು.
ಸಮಾರಂಭದಲ್ಲಿ ಕೋಳ್ಯೂರರ ಪತ್ನಿ ಶ್ರೀಮತಿ ಭಾಗೀರಥಿ ರಾವ್, ಶಾಂತಿವನ ಟ್ರಸ್ಟ್ನ ಕಾರ್ಯದರ್ಶಿ ಸೀತಾರಾಮ ತೋಳ್ಪಡಿತ್ತಾಯ, ಕಲಾವಿದ ಚಂದ್ರಶೇಖರ ಧರ್ಮಸ್ಥಳ, ಯಕ್ಷಗಾನ ಕಲಾರಂಗದ ಸದಸ್ಯರುಗಳಾದ ಅನಂತರಾಜ ಉಪಾಧ್ಯ, ಪೃಥ್ವಿರಾಜ ಕವತ್ತಾರ್, ಎಚ್.ಎನ್. ಶೃಂಗೇಶ್ವರ, ಕಿಶೋರ್ ಸಿ. ಉದ್ಯಾವರ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜನೆಯನ್ನು ಕೊಳ್ಯೂರರ ಸುಪುತ್ರ ಕೆ. ಶ್ರೀಧರ ರಾವ್ ಹಾಗೂ ಮೊಮ್ಮಗ ನಟರಾಜ್ ಗೋಪಾಡಿ ಮಾಡಿದರು.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!



