ಡಾ. ಶಿವರಾಮ ಕಾರಂತರ ಜನ್ಮದಿನಾಚರಣೆ ಪ್ರಯುಕ್ತ ನಾಳೆ ದಿನಾಂಕ 10.10.2020 ನೇ ಶನಿವಾರ ಮಧ್ಯಾಹ್ನ 2.30 ಕ್ಕೆ ಸರಿಯಾಗಿ ಪುತ್ತೂರಿನ ಬಾಲವನದಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ‘ಬಾಲವನ’ ಪ್ರಶಸ್ತಿಯನ್ನು ಪ್ರೊ| ಅಮೃತ ಸೋಮೇಶ್ವರ ಅವರಿಗೆ ನೀಡಲಾಗುವುದು. ಪ್ರಶಸ್ತಿ ಪ್ರಧಾನ ಸಮಾರಂಭದ ಅನಂತರ ‘ಶ್ರೀಕೃಷ್ಣ ಸಂಧಾನ – ಭೀಷ್ಮ ಸೇನಾಧಿಪತ್ಯ’ ಎಂಬ ತಾಳಮದ್ದಳೆ ನಡೆಯಲಿದೆ. ತಾಳಮದ್ದಳೆಯಲ್ಲಿ ಪ್ರಖ್ಯಾತ ಕಲಾವಿದರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರ ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಿದೆ.
ಪ್ರೊ| ಅಮೃತ ಸೋಮೇಶ್ವರ ಅವರಿಗೆ ಬಾಲವನ ಪ್ರಶಸ್ತಿ
ಡಾ. ಶಿವರಾಮ ಕಾರಂತರ ಜನ್ಮದಿನಾಚರಣೆ ಪ್ರಯುಕ್ತ ನೀಡಲಾಗುವ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ – ೨೦೨೦ ನ್ನು ಈ ಬಾರಿ ಖ್ಯಾತ ಜಾನಪದ ಹಾಗೂ ಯಕ್ಷಗಾನ ವಿದ್ವಾಂಸ, ಪ್ರಸಂಗಕರ್ತ, ಸಾಹಿತಿ, ನಿವೃತ್ತ ಉಪನ್ಯಾಸಕರಾದ ಪ್ರೊ| ಅಮೃತ ಸೋಮೇಶ್ವರ ಅವರಿಗೆ ನೀಡಲಾಗುವುದು. ನಾಳೆ ದಿನಾಂಕ 10.10.2020 ನೇ ಶನಿವಾರ ಮಧ್ಯಾಹ್ನ 2.30 ಕ್ಕೆ ಸರಿಯಾಗಿ ಬಾಲವನದಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರೊ| ಅಮೃತ ಸೋಮೇಶ್ವರ ಅವರಿಗೆ ನೀಡಲಾಗುವುದು.
ಕನ್ನಡ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಡಾ. ಶಿವರಾಮ ಕಾರಂತರ ಬಾಲವನ ಪುತ್ತೂರು ಮತ್ತು ಸಹಾಯಕ ಆಯುಕ್ತರ ಕಚೇರಿ, ಪುತ್ತೂರು ಉಪವಿಭಾಗ ಇವರ ಜಂಟಿ ಸಂಯೋಜನೆಯಲ್ಲಿ ಈ ಪ್ರಶಸ್ತಿ ಪ್ರಧಾನ ನಡೆಯಲಿದೆ. ಪ್ರಶಸ್ತಿ ಪ್ರಧಾನ ಸಮಾರಂಭದ ಅನಂತರ ‘ಶ್ರೀಕೃಷ್ಣ ಸಂಧಾನ – ಭೀಷ್ಮ ಸೇನಾಧಿಪತ್ಯ’ ಎಂಬ ತಾಳಮದ್ದಳೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮದ ನೇರ ಪ್ರಸಾರ ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಿದೆ.
ಚಿಟ್ಟಾಣಿ ರಾಮಚಂದ್ರ ಹೆಗಡೆ (Chittani Ramachandra Hegade)
ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಜೀವನ ಚರಿತ್ರೆ
ಹೆಸರು: ಚಿಟ್ಟಾಣಿ ಶ್ರೀ ರಾಮಚಂದ್ರ ಹೆಗಡೆ
ಪತ್ನಿ: ಶ್ರೀಮತಿ ಸುಶೀಲ (ಕಡತೋಕ ಮಳ್ಳಜ್ಜಿ ನಾರಾಯಣ ಹೆಗಡೆಯವರ ಕಿರಿಯ ಪುತ್ರಿ ಸುಶೀಲ)
ಜನನ: 1935ನೇ ಇಸವಿ ಆಗಸ್ಟ್ 18ರಂದು
ಜನನ ಸ್ಥಳ: ಉತ್ತರ ಕನ್ನಡ ಜಿಲ್ಲೆಯ ಹೊಸಾಕುಳಿ ಗ್ರಾಮದ ಒಂದು ಹಳ್ಳಿ ಚಿಟ್ಟಾಣಿ.
ತಂದೆ ತಾಯಿ: ತಂದೆ ಶ್ರೀ ಸುಬ್ರಾಯ ಹೆಗಡೆ. ತಾಯಿ ಶ್ರೀಮತಿ ಗಣಪಿ ಅಮ್ಮ.
ಯಕ್ಷಗಾನ ಗುರುಗಳು: ಸಂತೆಗುಳಿ ಬಾಳೆಗದ್ದೆ ರಾಮಕೃಷ್ಣ ಭಟ್ಟರು
ರಂಗಮಾಹಿತಿ: ಆ ಕಾಲದ ಪ್ರಸಿಧ್ಧ ವೇಷಧಾರಿಗಳಿಂದ
ಅನುಭವ: ೫೦ ವರ್ಷಕ್ಕೂ ಮೇಲ್ಪಟ್ಟು ಮೇಳದ ತಿರುಗಾಟ (ಬಾಳೆಗೆದ್ದೆ ಮೇಳ, ಮೂಡ್ಕಣಿ ಮೇಳ, ಮಾವಿನಕುರ್ವೆ ಮೇಳ, ಮೂರೂರು ಮೇಳ, ಗುಂಡಬಾಳಾ ಮೇಳ, ಸಂಯುಕ್ತ ಮೇಳ, ಕೊಳಗಿಬೀಸ್ ಮೇಳ, ಅಮೃತೇಶ್ವರೀ ಮೇಳ (ಅಮೃತೇಶ್ವರೀ ಮೇಳ-13 ವರ್ಷಗಳು), ಶಿರಸಿ ಪಂಚಲಿಂಗೇಶ್ವರ ಮೇಳ, ಸಾಲಿಗ್ರಾಮ ಮೇಳ-೧ ವರ್ಷ, ಬಚ್ಚಗಾರು ಮೇಳ, ಶಿರಸಿ ಮಾರಿಕಾಂಬಾ ಮೇಳ, ಪೆರ್ಡೂರು ಮೇಳ, ನಂತರ ಮೇಳದ ತಿರುಗಾಟ ನಿಲ್ಲಿಸಿದ್ದರು. ಆದರೆ‘ಬಂಗಾರಮಕ್ಕಿ ವೀರಾಂಜನೇಯ ಯಕ್ಷಮಿತ್ರ ಮಂಡಳಿ ಎಂಬ ಬಯಲಾಟದ ತಂಡದಲ್ಲಿ ಭಾಗವಹಿಸುತ್ತಿದ್ದರು. ಅಲ್ಲದೆ ಅತಿಥಿ ಕಲಾವಿದರಾಗಿ ವೇಷ ಮಾಡುತ್ತಿದ್ದರು.
ಮಕ್ಕಳು: ಪುತ್ರರಾದ ಶ್ರೀ ಸುಬ್ರಹ್ಮಣ್ಯ ಚಿಟ್ಟಾಣಿ ಮತ್ತು ಶ್ರೀ ನರಸಿಂಹ ಚಿಟ್ಟಾಣಿ ಯಕ್ಷಗಾನ ಕ್ಷೇತ್ರದಲ್ಲಿ ಒಳ್ಳೆಯ ಕಲಾವಿದರಾಗಿ ಹೆಸರು ಗಳಿಸಿದ್ದಾರೆ. ಮೊಮ್ಮಗ ಶ್ರೀ ಕಾರ್ತಿಕ್ ಚಿಟ್ಟಾಣಿ ಅವರು ಉದಯೋನ್ಮುಖ ಕಲಾವಿದರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.ಚಿಟ್ಟಾಣಿಯವರ ಮನಮೆಚ್ಚಿದ ಹಾಗೂ ಅವರಿಗೆ ಹೆಸರು ತಂದುಕೊಟ್ಟ ಪಾತ್ರಗಳು: ಸಾಲ್ವ (ಭೀಷ್ಮವಿಜಯ) ಸುಧನ್ವ (ಸುಧನ್ವಾರ್ಜುನ) ಅರ್ಜುನ (ಕೃಷ್ಣಾರ್ಜುನಕಾಳಗ) ಅರ್ಜುನ (ಐರಾವತ) ಕೃಷ್ಣ (ಮಾರುತಿ ಪ್ರತಾಪ) ಹನೂಮಂತ (ಲಂಕಾದಹನ) ದಕ್ಷ (ದಕ್ಷಯಜ್ಞ) ಭರತ (ಧರ್ಮಾಂಗದ ದಿಗ್ವಿಜಯ) ಕೌರವ (ಗದಾಪರ್ವ) ಭಸ್ಮಾಸುರ (ಭಸ್ಮಾಸುರ-ಮೋಹಿನಿ) ಕಲಾಧರ (ಕಾಳೀದಾಸ) ಕೃಷ್ಣ (ಚಂದ್ರಾವಳಿವಿಲಾಸ) ಕೀಚಕ (ಕೀಚಕವಧೆ) ದುಷ್ಟಬುದ್ಧಿ (ಚಂದ್ರಹಾಸಚರಿತ್ರೆ) ರುದ್ರಕೋಪ(ಚಿತ್ರಾಕ್ಷಿಕಲ್ಯಾಣ) ಕಂಸ (ಕಂಸವಧೆ) ಕಾರ್ತವೀರ್ಯ(ಕಾರ್ತವೀರ್ಯಾರ್ಜುನ ಕಾಳಗ) ಮಾಗಧ (ಮಾಗಧವಧೆ) ಸುಂದರರಾವಣ (ಚೂಡಾಮಣಿ)
ಕೀಚಕ, ಭಸ್ಮಾಸುರ, ರುದ್ರಕೋಪ, ಕಾರ್ತವೀರ್ಯ, ಕೌರವ, ದುಷ್ಟಬುದ್ಧಿ, ಸಂಧಾನದ ಕೃಷ್ಣ ಇವೆಲ್ಲ ಅವರಿಗೆ ಹೆಸರು ತಂದುಕೊಟ್ಟ ಪಾತ್ರಗಳು.
ಪ್ರಶಸ್ತಿ/ಅಭಿನಂದನೆ/ಸನ್ಮಾನಗಳು: ಹಲವಾರು ಸನ್ಮಾನ ಪ್ರಶಸ್ತಿಗಳು ಅವರನ್ನು ಅರಸಿಕೊಂಡು ಬಂದಿವೆ. ಅದರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮತ್ತು ಅನೇಕ ಸಂಘ-ಸಂಸ್ಥೆಗಳು ‘ಕಲಾಧರ ಚಿಟ್ಟಾಣಿ’ ಅವರನ್ನು ಸನ್ಮಾನಿಸಿ ಗೌರವಿಸಿದೆ ಚಿಟ್ಟಾಣಿಯವರ ವಿಶೇಷ ಕೃತಜ್ಞತೆ: ಕಾಳಿದಾಸ ಪ್ರಸಂಗದಲ್ಲಿ ಕಲಾಧರನ ಪಾತ್ರ ಮಾಡಿಸಿ ಪ್ರೋತ್ಸಾಹಿಸಿದ ಕಡತೋಕಾ ಮಂಜುನಾಥ ಭಾಗವತರಿಗೆ ನಿಧನ: 2017ನೇ ಇಸವಿ ಒಕ್ಟೋಬರ್ 3ರಂದು
ಬಲಿಪ ನಾರಾಯಣ ಭಾಗವತ (Balipa Narayana Bhagavatha)
ಬಲಿಪ ನಾರಾಯಣ ಭಾಗವತರ ಜೀವನ ಚರಿತ್ರೆ (Biography of Balipa Narayana Bhagavatha)
ಹೆಸರು: ಬಲಿಪ ನಾರಾಯಣ ಭಾಗವತರು
ಪತ್ನಿ: ಶ್ರೀಮತಿ ಜಯಲಕ್ಷ್ಮಿ
ಜನನ: 19.03.1938
ಜನನ ಸ್ಥಳ: ಕಾಸರಗೋಡು ಜಿಲ್ಲೆಯ ಎಣ್ಮಕಜೆ ಗ್ರಾಮದ ಪಡ್ರೆ ಎಂಬಲ್ಲಿ
ತಂದೆ ತಾಯಿ: ಶ್ರೀ ಬಲಿಪ ಮಾಧವ ಭಟ್ಟ ಮತ್ತು ಶ್ರೀಮತಿ ಸರಸ್ವತಿ ಅಮ್ಮ
ಯಕ್ಷಗಾನ ಗುರುಗಳು: ಅಜ್ಜ ಹಿರಿಯ ಬಲಿಪ ನಾರಾಯಣ ಭಟ್ಟ ಮತ್ತು ತಂದೆ ಬಲಿಪ ಮಾಧವ ಭಟ್ಟ
ರಂಗಮಾಹಿತಿ: ಆ ಕಾಲದ ಪ್ರಸಿಧ್ಧ ಮದ್ದಳೆಗಾರರಾದ ದಿ| ಕುದ್ರೆಕೋಡ್ಲು ರಾಮ ಭಟ್ಟ, ವೇಷಧಾರಿಗಳಾದ ದಿ| ಕುಂಬಳೆ ತಿಮ್ಮಪ್ಪ ಮತ್ತು ದಿ| ಅಗಲ್ಪಾಡಿ ಕುಂಞಿ ಕೃಷ್ಣ ಮಣಿಯಾಣಿ
ಅನುಭವ: 55 ವರ್ಷಕ್ಕೂ ಮೇಲ್ಪಟ್ಟು (ಕೂಡ್ಲು, ಕುಂಡಾವು, ರೆಂಜಾಳ, ಮೂಲ್ಕಿ, ಭಗವತಿ ಮೇಳಗಳಲ್ಲಿ ಅಲ್ಲದೆ ಕಟೀಲು ಮೇಳವೊಂದರಲ್ಲೇ 25 ವರ್ಷಕ್ಕೂ ಮೇಲ್ಪಟ್ಟು ತಿರುಗಾಟ ನಡೆಸಿದ್ದಾರೆ.
ಮಕ್ಕಳು: ನಾಲ್ಕು ಜನ ಗಂಡುಮಕ್ಕಳು ( ಬಲಿಪ ಮಾಧವ ಭಟ್ಟ, ಹವ್ಯಾಸೀ ಭಾಗವತರಾದ ಬಲಿಪ ಶಿವಶಂಕರ ಭಟ್ಟ, ಬಲಿಪ ಶಶಿಧರ ಭಟ್ಟ, ಹಾಗೂ ಪ್ರಖ್ಯಾತ ಭಾಗವತರಾಗಿ ಪ್ರಸ್ತುತ ಕಟೀಲು ಮೇಳದಲ್ಲಿ ಭಾಗವತರಾಗಿ ಸೇವೆ ಸಲ್ಲಿಸುತ್ತಿರುವ ಬಲಿಪ ಪ್ರಸಾದ ಭಟ್ಟ)
ರಚಿಸಿದ ಪ್ರಸಂಗಗಳು: 35ಕ್ಕೂ ಮಿಕ್ಕಿ
ಪ್ರಶಸ್ತಿ/ಅಭಿನಂದನೆ/ಸನ್ಮಾನಗಳು: ಸುಮಾರು 200 ಕ್ಕೂ ಹೆಚ್ಚು. ಅದರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2010, ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ 2010, ಆಳ್ವಾಸ್ ನುಡಿಸಿರಿ 2010, ಕರ್ನಾಟಕ ಸಂಘ ದುಬೈ 1988, ಶ್ರೀ ಎಡನೀರು ಮಠ 1994, ಕರಾವಳಿ ಯಕ್ಷಗಾನ ಸಮ್ಮೇಳನ 2000, ಕರ್ನಾಟಕ ಜನಪದ ಪರಿಷತ್ತು ಬೆಂಗಳೂರು 2002, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ, 2002, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಬೆಂಗಳೂರು 2004, ಕೇರಳ ಸಂಗೀತ ನಾಟಕ ಅಕಾಡೆಮಿ ತಿರುವನಂತಪುರ 2007, ಕರ್ನಾಟಕ ಜಾನಪದ ಕಲಾ ಅಧ್ಯಯನ ಕೇಂದ್ರ ಉಡುಪಿ 2008, ಕಲ್ಕೂರ ಪ್ರತಿಷ್ಠಾನ 2015 ಮೊದಲಾದುವುಗಳು.
ಸಹೃದಯೀ ಕಲಾವಿದ – ‘ಕಿದೂರ್’ದ ಮುತ್ತು ಜಯೇಂದ್ರ ಕುಲಾಲ್ ಕಿದೂರ್
ಸಹೃದಯೀ ಕಲಾವಿದ ಶ್ರೀ ಜಯೇಂದ್ರ ಕುಲಾಲ್ ಕಿದೂರ್ ಕನ್ನಡ ಮತ್ತು ತುಳು ಭಾಷೆಗಳ ಯಕ್ಷಗಾನ ಪ್ರದರ್ಶನಗಳಲ್ಲಿ ವೇಷ ಮಾಡಬಲ್ಲ ಸಮರ್ಥರು. ಸರಳ ಸಜ್ಜನ ವಿನಯವಂತ ಕಲಾವಿದರು. ತೆರೆದುಕೊಳ್ಳುವ ಸ್ವಭಾವವಲ್ಲ. ಸದಾ ಮುಚ್ಚಿಕೊಳ್ಳುವ ಸ್ವಭಾವ. ತಾನು ಕಾಣಿಸಿಕೊಳ್ಳಬೇಕೆಂಬ ಬಯಕೆ ಇವರಿಗಿಲ್ಲ. ಯಕ್ಷಗಾನ ಕಲಾವಿದನಾಗಿ ರಂಗವೇರಬೇಕೆಂಬ ಬಯಕೆಯನ್ನು ಮಾತ್ರ ಇರಿಸಿಕೊಂಡವರು. ಕಳೆದ ಮೂವತ್ತಕ್ಕೂ ಹೆಚ್ಚು ವರುಷಗಳಿಂದ ವೃತ್ತಿ ಕಲಾವಿದರಾಗಿ ಅಭಿನಯಿಸುತ್ತಿದ್ದಾರೆ. ಶ್ರೀ ಜಯೇಂದ್ರ ಕುಲಾಲರು ಜನಿಸಿದ್ದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕಿದೂರು ಗ್ರಾಮದ ತಂಜರಕಟ್ಟೆ ಎಂಬಲ್ಲಿ. ಇದು ಕುಂಬಳೆಯ ಸಮೀಪದಲ್ಲಿದೆ. ಶ್ರೀ ಫಕೀರ ಮೂಲ್ಯ ಮತ್ತು ಲಕ್ಷ್ಮಿ ದಂಪತಿಗಳ ಪುತ್ರನಾಗಿ 1972 ಏಪ್ರಿಲ್ 24ರಂದು ಜನನ. ಇಚ್ಲಂಪಾಡಿಯ ಜ್ಞಾನೋದಯ ಹಿರಿಯ ಬುನಾದಿ ಶಾಲೆಯಲ್ಲಿ 7ನೇ ತರಗತಿಯ ವರೆಗೆ ಓದಿದ್ದರು.
ಶಾಲಾ ವಿದ್ಯಾರ್ಥಿಯಾಗಿದ್ದಾಗಲೇ ಯಕ್ಷಗಾನದತ್ತ ಆಕರ್ಷಿತರಾಗಿದ್ದರು. ಕಳತ್ತೂರು ಶಾಲೆಯ ಮೈದಾನದಲ್ಲಿ ಕರ್ನಾಟಕ, ಸುರತ್ಕಲ್, ಕದ್ರಿ ಮೊದಲಾದ ಮೇಳಗಳ ಆಟಗಳು ನಡೆಯುತ್ತಿತ್ತು. ಎಲ್ಲಾ ಆಟಗಳಿಗೂ ಜಯೇಂದ್ರರ ಉಪಸ್ಥಿತಿ ಇದ್ದೇ ಇರುತ್ತಿತ್ತು. ಮನೆಯವರು ಕಳುಹಿಸುವುದಿಲ್ಲ ಎಂಬ ಕಾರಣಕ್ಕೆ ಶಾಲೆಯಿಂದ ಮನೆಗೆ ಬಾರದೆ ಆಟ ನೋಡಿ ಮರುದಿನವೂ ಶಾಲೆಗೇ ಹೋಗಿ ಮತ್ತೆ ಮನೆಗೆ ಬಂದದ್ದೂ ಇದೆ. ತಂದೆ ತಾಯಿಯರು ಗದರಿಸಿ ಮನೆಗೆ ಕರೆದೊಯ್ದದ್ದೂ ಇದೆ. ಜಯೇಂದ್ರರಿಗೆ ಯಕ್ಷಗಾನಾಸಕ್ತಿ ಅಷ್ಟು ತೀವ್ರವಾಗಿತ್ತು. ಧರ್ಮಸ್ಥಳ ಮೇಳದ ಆಟಕ್ಕೆ ಮಾನ್ಯ, ನೀರ್ಚಾಲು ಎಂಬ ಸ್ಥಳಗಳಿಗೆ ಮನೆಯಿಂದ ನಡೆದೇ ಹೋಗುತ್ತಿದ್ದರು. ಎಳವೆಯಲ್ಲೇ ಇವರು ಅರುವ ಕೊರಗಪ್ಪ ಶೆಟ್ಟಿಯವರ ಅಭಿಮಾನಿಯಾಗಿದ್ದರು.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions
ಆಟ ನೋಡಿ ಬಂದ ಬಳಿಕ ಗೆಳೆಯರೊಂದಿಗೆ ಮನೆಯ ಸಮೀಪ ಅಣಕು ಯಕ್ಷಗಾನ ಪ್ರದರ್ಶನ. ಬೂದಿಯ ನಾಮ ಬಳಿದು, ಹಾಳೆಯಿಂದ ತಯಾರಿಸಿದ ಕಿರೀಟ, ಅಮ್ಮನ ಸೀರೆಯನ್ನೇ ವೇಷಭೂಷಣಗಳನ್ನಾಗಿ ಧರಿಸಿ ಎಲ್ಲರೂ ಕುಣಿದು ಸಂತೋಷಪಡುತ್ತಿದ್ದರು. ಮನೆಯಲ್ಲಿ ಹಿರಿಯರು ನಿದ್ರಿಸಿದ ನಂತರ ಗೆಳೆಯರೊಂದಿಗೆ ತೆರಳಿ ಆಟ ನೋಡಿದ್ದೂ ಇದೆ. ಹೀಗೆ ತಾನೂ ಯಕ್ಷಗಾನ ಕಲಾವಿದನಾಗಬೇಕೆಂಬ ಆಸೆಯೂ ಶ್ರೀ ಜಯೇಂದ್ರ ಕುಲಾಲ್ ಅವರಿಗೆ ಹುಟ್ಟಿಕೊಂಡಿತ್ತು. ನಾನೂ ಒಬ್ಬ ಕಲಾವಿದನಾಗುವಂತೆ ಅನುಗ್ರಹಿಸು ಎಂದು ದೇವರಲ್ಲಿ ಪ್ರಾರ್ಥಿಸಿದ್ದರಂತೆ.
ಇಚ್ಲಂಪಾಡಿ ಶಾಲೆಯ ವಿದ್ಯಾರ್ಥಿಯಾಗಿರುವಾಗ ಶಾಲೆಯಲ್ಲಿ ಕೋಟಿ ಚೆನ್ನಯ ತುಳು ನಾಟಕದಲ್ಲಿ ಪಯ್ಯ ಬೈದ್ಯ ವೇಷ ಮಾಡುವ ಅವಕಾಶ ಸಿಕ್ಕಿತ್ತು. ಇದು 7 ನೇ ತರಗತಿಯಲ್ಲಿ ಓದುತ್ತಿರುವಾಗ. ಅಲ್ಲದೆ ಮತ್ತೆರಡು ನಾಟಕಗಳಲ್ಲಿ ವೇಷ ಮಾಡಿದ್ದರು. ತಂದೆಯವರ ಅಸೌಖ್ಯದ ಕಾರಣದಿಂದ ಶಾಲೆ ಬಿಡಬೇಕಾಗಿ ಬಂದಿತ್ತು. ಜೀವನ ನಿರ್ವಹಣೆಗಾಗಿ ಒಂದು ವರ್ಷ ಹೋಟೆಲ್ ಕೆಲಸವನ್ನೂ ಮಾಡಿದ್ದರು. ತಂದೆಯವರ ಮರಣಾ ನಂತರ ಮನೆಯ ಹೊಣೆಗಾರಿಕೆ ಜಯೇಂದ್ರರ ಹೆಗಲ ಮೇಲೆ ಬಿದ್ದಿತ್ತು. ತಾಯಿಯೊಂದಿಗೆ ಕೂಲಿ ಕೆಲಸಕ್ಕೆ ಹೋಗಿ ಸಂಪಾದಿಸಿ ಮನೆವಾರ್ತೆ ನೋಡಿಕೊಳ್ಳುತ್ತಿದ್ದರು. ಈ ಸಂದರ್ಭಗಳಲ್ಲೂ ಯಕ್ಷಗಾನ ಪ್ರದರ್ಶನಗಳನ್ನು ನೋಡುತ್ತಿದ್ದರು.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions
ಕಲಾವಿದನಾಗಬೇಕೆಂಬ ಆಸೆಯೂ ಅಧಿಕವಾಗಿತ್ತು. ಚೌಕಿಗೆ ಹೋಗಿ ಕಲಾವಿದರು ಬಣ್ಣ ಹಾಕುವುದನ್ನೂ ವೇಷ ಧರಿಸಿ ಸಿದ್ಧವಾಗುವುದನ್ನೂ ಆಸಕ್ತಿಯಿಂದ ಗಮನಿಸುತ್ತಲೇ ಬೆಳೆದವರರು ಜಯೇಂದ್ರರು. ಇದೆ ಸಂದರ್ಭದಲ್ಲಿ ನಾಟ್ಯ ಕಲಿಯುವ ಅವಕಾಶವು ಒದಗಿ ಬಂದಿತ್ತು. ಕಿದೂರು ದೇವಸ್ಥಾನದಲ್ಲಿ ಶ್ರೀ ಉಂಡೆಮನೆ ಶ್ರೀಕೃಷ್ಣ ಭಟ್ಟರು ನಾಟ್ಯ ತರಬೇತಿಯನ್ನು ನೀಡುತ್ತಿದ್ದರು. ಜಯೇಂದ್ರರು ತರಬೇತಿಗೆ ಸೇರಿ ಯಕ್ಷಗಾನ ಹೆಜ್ಜೆಗಾರಿಕೆಯನ್ನು ಶ್ರೀಕೃಷ್ಣ ಭಟ್ಟರಿಂದ ಕಲಿತರು. ತರಬೇತಿಯ ನಂತರ ಕಿದೂರು ದೇವಸ್ಥಾನದಲ್ಲಿ ಮೊದಲ ಪ್ರದರ್ಶನ. ಅಗ್ರಪೂಜೆ ಪ್ರಸಂಗದಲ್ಲಿ ಸೋಮದತ್ತನಾಗಿ ರಂಗ ಪ್ರವೇಶ.
ಉಂಡೆಮನೆಯವರು ವೇಷ ಮಾಡಲು ನಿರಂತರ ಅವಕಾಶಗಳನ್ನಿತ್ತು ಪ್ರೋತ್ಸಾಹಿಸಿದ್ದರು. ಅಲ್ಲದೆ ನಿನಗೆ ಹಾಸ್ಯದ ವೇಷಗಳನ್ನು ಮಾಡಬಹುದು ಎಂಬ ಸೂಚನೆಯನ್ನೂ ನೀಡಿದರಂತೆ. ಬಳಿಕ ಕುಂಬಳೆ ಶ್ರೀ ಸೇಸಪ್ಪನವರ ಹೇಳಿಕೆಯ ಮೇರೆಗೆ ಉಪ್ಪಳ ಮೇಳಕ್ಕೆ. ಮೊದಲ ದಿನವೇ ಅನಿವಾರ್ಯವಾಗಿ ಹಾಸ್ಯ ಪಾತ್ರವನ್ನು ಮಾಡಬೇಕಾಗಿ ಬಂದಿತ್ತು. ಬಂಬ್ರಾಣ ಕಡಮಣ್ಣಾಯರ ಮನೆಯಲ್ಲಿ ನಡೆದ ಪ್ರದರ್ಶನ. ಶ್ರೀಕೃಷ್ಣ ಲೀಲೆ ಪ್ರಸಂಗದಲ್ಲಿ ವಿಜಯನಾಗಿ ಅಭಿನಯಿಸಿದ್ದರು. ಮೂರು ವರ್ಷಗಳ ಕಾಲ ಉಪ್ಪಳ ಮೇಳದಲ್ಲಿ ಕಲಾಸೇವೆ. ಜತೆಗೆ ಹಗಲು ಕೂಲಿ ಕೆಲಸಕ್ಕೂ ಹೋಗುತ್ತಿದ್ದರು. ಬಳಿಕ ನೀರ್ಚಾಲು ಶ್ರೀ ಅಯ್ಯಪ್ಪ ಭಜನಾ ಮಂದಿರದ ಬಳಿ ನಡೆದ ಆಟದಲ್ಲಿ ಇವರ ವೇಷವನ್ನು ನೋಡಿ ಅಡ್ಯಾರು ಶ್ರೀ ಶಂಕರ ಆಳ್ವರು ಬಪ್ಪನಾಡು ಮೇಳಕ್ಕೆ ಆಹ್ವಾನಿಸಿದ್ದರು. ಕೊಕ್ಕಡ ಈಶ್ವರ ಭಟ್, ಕೊಳ್ಯೂರು ರಾಮಚಂದ್ರ ರಾವ್ ಮೊದಲಾದವರು ಸದ್ರಿ ಮೇಳಕ್ಕೆ ಅತಿಥಿ ಕಲಾವಿದರಾಗಿ ಬರುತ್ತಿದ್ದರು. ಸುಬ್ರಾಯ ಹೊಳ್ಳ, ಧರ್ಮೇಂದ್ರ ಆಚಾರ್ಯ, ತಿಂಬರೆ ತ್ಯಾಂಪಣ್ಣ, ತಿಂಬರೆ ರಾಮ ಮೊದಲಾದವರ ಒಡನಾಟವೂ ದೊರಕಿತ್ತು. ಕನ್ಯಾನ ಸುಂದರ ಅವರು ಹಾಸ್ಯಗಾರರಾಗಿದ್ದರು. ಜಯೇಂದ್ರರು ಒತ್ತು ಹಾಸ್ಯಗಾರರಾಗಿ ಕಾಣಿಸಿಕೊಂಡರು.
ರಂಗಸ್ಥಳದ ಕೆಲಸ, ಲೈಟಿಂಗ್ಸ್, ವೇಷಗಾರಿಕೆ ಹೀಗೆ ಎಲ್ಲಾ ಕೆಲಸಗಳನ್ನೂ ಮೇಳದ ತಿರುಗಾಟದಲ್ಲಿ ಮಾಡಿದ್ದರು. ಬಪ್ಪನಾಡು ಮೇಳದಲ್ಲಿ 5 ವರ್ಷಗಳ ಕಾಲ ಕಲಾಸೇವೆಯನ್ನು ಮಾಡಿ ತಿರುಗಾಟ ನಿಲ್ಲಿಸಿದ್ದರು. ಬಳಿಕ ಊರಲ್ಲಿ ವಿದ್ಯುತ್ ಲೈನ್ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಮಳೆಗೆ ಕೆಲಸ ಮಾಡುತ್ತಿರುವಾಗ ಕಂಬದಿಂದ ಜಾರಿ ಎಡದ ಕೈಯ ನೋವನ್ನೂ ಒಂದು ವರ್ಷ ಅನುಭವಿಸಿದ್ದರು. ಬಳಿಕ ಕೂಡ್ಲು ಮೇಳ, ಹವ್ಯಾಸೀ ತಂಡಗಳಲ್ಲಿ ವೇಷ ಮಾಡುತ್ತಿದ್ದು, ಒಂದು ವರ್ಷ ದೇಂತಡ್ಕ ಮೇಳದಲ್ಲೂ ತಿರುಗಾಟ ನಡೆಸಿದ್ದರು. ಕಳೆದ ವರ್ಷ ಸುಂಕದಕಟ್ಟೆ ಮೇಳದಲ್ಲಿ ವ್ಯವಸಾಯ ಮಾಡಿದ್ದರು. ಹಾಸ್ಯ ಅಲ್ಲದೆ ಖಳನಾಯಕ, ಪೋಷಕ ಪಾತ್ರಗಳನ್ನೂ ಜಯೇಂದ್ರ ಕುಲಾಲರು ಉತ್ತಮವಾಗಿ ನಿರ್ವಹಿಸುತ್ತಾರೆ. ಬಪ್ಪನಾಡು ಕ್ಷೇತ್ರ ಮಹಾತ್ಮೆ ಪ್ರಸಂಗದಲ್ಲಿ ಪೂಕಳ, ನಾವಡರು, ನರಹರಿ ಮಾಸ್ತರ್, ಪಾಲೆಚ್ಚಾರು ಅವರುಗಳ ಬಪ್ಪ ಬ್ಯಾರಿಯ ಪಾತ್ರಕ್ಕೆ ಉಸ್ಮಾನ್ ಆಗಿ ಅಭಿನಯಿಸುವ ಅವಕಾಶ ಆಗಿತ್ತು. ಅರುವ ಕೊರಗಪ್ಪ ಶೆಟ್ಟಿ, ಕೊಳ್ತಿಗೆ ನಾರಾಯಣ ಗೌಡ, ಜಪ್ಪು ದಯಾನಂದ ಶೆಟ್ಟಿ, ಸರಪಾಡಿ ಅಶೋಕ ಶೆಟ್ಟಿ ಮೊದಲಾದವರ ಜೊತೆಗೂ ಹಾಸ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಜಯೇಂದ್ರ ಕುಲಾಲರನ್ನು ಸನ್ಮಾನಿಸಿ ಗೌರವಿಸಿವೆ. ಕುಲಾಲ ಸಂಘದವರು ‘ಕುಲಾಲ ಮುತ್ತು’ ಎಂಬ ಬಿರುದನ್ನೂ ನೀಡಿರುತ್ತಾರೆ. ಮೂಡಬಿದಿರೆಯಲ್ಲಿ ನಡೆದ ಸನ್ಮಾನದಲ್ಲಿ ‘ಕಿದೂರ್ದ ಮುತ್ತು’ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions
ಪ್ರಸಂಗದಲ್ಲಿ ಬರುವ ಎಲ್ಲಾ ಪಾತ್ರಗಳೂ ರಂಗಕ್ಕೆ ಅನಿವಾರ್ಯ. ಯಾವ ಪಾತ್ರವನ್ನೂ ನಗಣ್ಯ ಮಾಡುವಂತಿಲ್ಲ. ಎಲ್ಲಾ ಪಾತ್ರಗಳೂ ಆ ಪಾತ್ರಕ್ಕೆ ತಕ್ಕಂತೆ ಅಭಿನಯಿಸಿದಾಗ ಮಾತ್ರ ಪ್ರದರ್ಶನವು ಗೆಲ್ಲುತ್ತದೆ. ಹಿರಿಯರನ್ನು ಗೌರವಿಸಿ ಕಿರಿಯರನ್ನು ಪ್ರೀತಿಸುವ ಗುಣವೂ ಕಲಾವಿದರಿಗೆ ಇದ್ದಾಗ ಮೇಳದಲ್ಲಿ ಒಂದು ಕೌಟುಂಬಿಕ ವಾತಾವರಣವು ನಿರ್ಮಾಣವಾಗುತ್ತದೆ. ಇದರಿಂದ ಪ್ರದರ್ಶನಗಳೂ ಯಶಸ್ವಿಯಾಗುತ್ತವೆ ಎಂಬ ಅಭಿಪ್ರಾಯವನ್ನು ಹೊಂದಿರುವ ಇವರು ಕಲಾಜೀವನದಲ್ಲಿಯೂ ಸಂಸಾರಿಕವಾಗಿಯೂ ತೃಪ್ತರು. ಪತ್ನಿ ಪ್ರೇಮಾ. ಜಯೇಂದ್ರ ಕುಲಾಲ್ ಮತ್ತು ಪ್ರೇಮಾ ದಂಪತಿಗಳಿಗೆ ಐವರು ಹೆಣ್ಣು ಮಕ್ಕಳು. ಹಿರಿಯ ಪುತ್ರಿ ವಿದ್ಯಾಲಕ್ಷ್ಮಿ ವಿವಾಹಿತೆ. ದ್ವಿತೀಯ ಪುತ್ರಿ ಅಶ್ವಿನಿ ವಿವಾಹಿತೆ. ನಾಟ್ಯ ಕಲಿತು ವೇಷ ಮಾಡುತ್ತಿದ್ದರು. ತೃತೀಯ ಪುತ್ರಿ ಕು| ಹರ್ಷಿತಾ. ಚತುರ್ಥ ಪುತ್ರಿ ಕು| ಹರ್ಷಿಣಿ ಪಿಯುಸಿ ವಿಧ್ಯಾಭ್ಯಾಸವನ್ನು ಪೂರೈಸಿರುತ್ತಾಳೆ. ಪಂಚಮ ಪುತ್ರಿ ಕು| ಪಂಚಮಿ ಎಸ್.ಎಸ್.ಎಲ್.ಸಿ ಯಲ್ಲಿ 92 ಶೇಕಡಾ ಅಂಕಗಳನ್ನು ಗಳಿಸಿರುತ್ತಾಳೆ. ಕಿದೂರ್ದ ಮುತ್ತು ಶ್ರೀ ಜಯೇಂದ್ರ ಕುಲಾಲರಿಂದ ಇನ್ನಷ್ಟು ಕಲಾಸೇವೆಯು ನಡೆಯಲಿ.ಶ್ರೀ ದೇವರು ಸಕಲ ಭಾಗ್ಯಗಳನ್ನೂ ಅವರಿಗೆ ಅನುಗ್ರಹಿಸಲಿ ಎಂಬ ಹಾರೈಕೆಗಳು.
ಲೇಖಕ: ರವಿಶಂಕರ್ ವಳಕ್ಕುಂಜ
ಪಿ. ಮುರಲೀಧರ ಆಚಾರ್ಯ ನಿಧನ
ಪಿ. ಮುರಲೀಧರ ಆಚಾರ್ಯ ನಿಧನ
ಸಿಂಡಿಕೇಟ್ ಬ್ಯಾಂಕಿನಲ್ಲಿ ಅಸಿಸ್ಟೆಂಟ್ ಮೆನೇಜರ್ ಆಗಿ ನಿವೃತ್ತರಾಗಿದ್ದ ಪುತ್ತೂರು ಮುರಲೀಧರ ಆಚಾರ್ಯ (77 ವರ್ಷ) ನಿನ್ನೆ 08.10.2020ರಂದು ನಿಧನರಾದರು. ಪತ್ನಿ, ಈರ್ವರು ಪುತ್ರರು, ಓರ್ವ ಪುತ್ರಿಯನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಉಡುಪಿಯ ಯಕ್ಷಗಾನ ಕಲಾರಂಗದ ಆಜೀವ ಪೋಷಕ ಸದಸ್ಯರಾಗಿದ್ದರು.ಕಲಾ ಪ್ರೇಮಿಯಾದ ಆಚಾರ್ಯರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷರಾದ ಎಂ.ಗಂಗಾಧರ ರಾವ್ ಹಾಗು ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ವ್ಯಕ್ತ ಪಡಿಸಿದ್ದಾರೆ.
ಅರುವ ಕೊರಗಪ್ಪ ಶೆಟ್ಟಿ (Aruva Koragappa Shetty)
ಅರುವ ಕೊರಗಪ್ಪ ಶೆಟ್ಟಿಯವರ ಜೀವನ ಚರಿತ್ರೆ
ಹೆಸರು: ಶ್ರೀ ಅರುವ ಕೊರಗಪ್ಪ ಶೆಟ್ಟಿ ತಂದೆ: ದಿ| ಸುಬ್ಬಯ್ಯ ಶೆಟ್ಟಿ ತಾಯಿ: ದಿ| ಶಾಂತಮ್ಮ ಶೆಟ್ಟಿ ಪತ್ನಿ: ಶ್ರೀಮತಿ ಮಹಾಲಕ್ಷ್ಮಿ ಮಕ್ಕಳು: ದೇವಿಪ್ರಸಾದ್ ಮತ್ತು ಅರ್ಚನಾ.
ಅರುವ ಕೊರಗಪ್ಪ ಶೆಟ್ಟಿಯವರಜನನ: 1940 ರಲ್ಲಿ ವಯಸ್ಸು: 80 ವರ್ಷಗಳು ವೃತ್ತಿ: ಯಕ್ಷಗಾನ ಕಲಾವಿದ ಮತ್ತು ಕೃಷಿ. ಕಲಾವಿದರಾಗಿ ಅನುಭವ : ಕಟೀಲು ಮೇಳದಲ್ಲಿ 3 ವರ್ಷಗಳು, ಕುತ್ಯಾಳ ಮೇಳ- 2ವರ್ಷಗಳು, ಕೂಡ್ಲು ಮೇಳ- 2 ವರ್ಷ, ಕುಂಡಾವು ಮೇಳ- 2 ವರ್ಷ, ಕರ್ನಾಟಕ ಮೇಳ- 31 ವರ್ಷ, ಮಂಗಳಾದೇವಿ ಮೇಳ- 12 ವರ್ಷ ಎಡನೀರು ಮೇಳ- 1 ವರ್ಷ, ಕದ್ರಿ ಮೇಳ- 2ವರ್ಷ, ಬಪ್ಪನಾಡು ಹಾಗೂ ಇತರ- 8 ವರ್ಷಗಳು
ಒಟ್ಟು ಕಲಾಸೇವೆ: 63 ವರ್ಷಗಳು. ಸನ್ಮಾನ ಪ್ರಶಸ್ತಿಗಳು: ಒಟ್ಟು 400ಕ್ಕಿಂತಲೂ ಅಧಿಕ ಸನ್ಮಾನಗಳನ್ನು ಪಡೆದ ಹೆಗ್ಗಳಿಕೆ ಇವರಿಗಿದೆ. ಕರ್ನಾಟಕ ರಾಜ್ಯ ಪ್ರಶಸ್ತಿ, ಪೇಜಾವರ ಪ್ರಶಸ್ತಿ, ಎಡನೀರು ಪ್ರಶಸ್ತಿ, ಒಡಿಯೂರು ಪ್ರಶಸ್ತಿ, ಮಣಿಲ ಪ್ರಶಸ್ತಿ, ರೋಟರಿ ಪ್ರಶಸ್ತಿ, ಲಯನ್ಸ್ ಪ್ರಶಸ್ತಿ ಮೊದಲಾದುವುಗಳು. ಬಿರುದು ಬಾವಲಿಗಳು: ರಂಗಸ್ಥಳದ ರಾಜ, ಅಭಿನಯ ಭಾರ್ಗವ, ರಂಗಶಿಲ್ಪಿ ಮೊದಲಾದುವುಗಳು. ನೆನಪಿಡುವ ಘಟನೆ ನಡೆದದ್ದು: ದೇರಳಕಟ್ಟೆಯಲ್ಲಿ ‘ದ್ರೌಪದೀ ವಸ್ತ್ರಾಪಹಾರ’ ಆಟದ ಸಂದರ್ಭದಲ್ಲಿ ದ್ರೌಪದಿಯ ಸೀರೆಯನ್ನು ಸೆಳೆಯುವ ಸಂದರ್ಭದಲ್ಲಿ ಮುದುಕಿಯೊಬ್ಬಳು ಚೂರಿಯನ್ನು ತೆಗೆದು ರಂಗಸ್ಥಳದತ್ತ ಎಸೆದಳು. ಇದು ಅರುವ ಕೊರಗಪ್ಪ ಶೆಟ್ಟಿಯವರ ಪಾತ್ರಚಿತ್ರಣದ ನೈಜತೆಯನ್ನು ಪ್ರತಿಬಿಂಬಿಸಿದ ಘಟನೆ. ವಿಶಿಷ್ಟ ಕಾರ್ಯಕ್ರಮ: ಅರುವ ಕೊರಗಪ್ಪ ಶೆಟ್ಟಿಯವರ ದುಶ್ಶಾಸನ ಪಾತ್ರ ಅವರ ಮಾಸ್ಟರ್ ಪೀಸ್. ಅವರು ದುಶ್ಶಾಸನ ಪಾತ್ರ ಮಾಡುತ್ತಾ 50 ವರ್ಷಗಳನ್ನು ಪೂರೈಸಿದಾಗ ದುಶ್ಶಾಸನ – 50 ಎಂಬ ಕಾರ್ಯಕ್ರಮ ನಡೆಯಿತಂತೆ.
ಅರುವ ಕೊರಗಪ್ಪ ಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಮತ್ತು ಸಮಾಜಸೇವೆ : ಪ್ರತಿಷ್ಠಾನದಿಂದ ತುಂಬಾ ಜನರು ಪ್ರಯೋಜನ ಪಡೆದಿದ್ದಾರೆ. ವಿವಾಹಯೋಗ್ಯರಾದ ಸುಮಾರು 75 ಹೆಣ್ಣುಮಕ್ಕಳ ವಿವಾಹಕ್ಕೆ ಧನಸಹಾಯ ಮಾಡಿದ್ದಾರೆ. ಸುಮಾರು 75 ಕಲಾವಿದರಿಗೆ ನಿಧಿಸಹಿತ ಸನ್ಮಾನ ಮಾಡಿದ್ದಾರೆ. ಸುಮಾರು ಆರೇಳು ಅಶಕ್ತ ಕಲಾವಿದರಿಗೆ ನಿಧಿ ಸಮರ್ಪಿಸಿದ್ದಾರೆ. ಹಲವಾರು ಮಕ್ಕಳಿಗೆ ವಿದ್ಯಾರ್ಥಿವೇತನವನ್ನೂ ನೀಡುತ್ತಿದ್ದಾರೆ.
ಪುತ್ತೂರು ನಾರಾಯಣ ಹೆಗ್ಡೆ (Puttur Narayana Hegde)
ಪುತ್ತೂರು ನಾರಾಯಣ ಹೆಗ್ಡೆಯವರ ಜೀವನ ಚರಿತ್ರೆ
ಹೆಸರು: ಪುತ್ತೂರು ನಾರಾಯಣ ಹೆಗ್ಡೆ
ವೃತ್ತಿ: ಯಕ್ಷಗಾನ ಕಲಾವಿದತಂದೆ : ಪುತ್ತೂರು ಸುಬ್ರಾಯ ಹೆಗಡೆ.
ತಾಯಿ : ಸೀತಮ್ಮ
ಒಡಹುಟ್ಟಿದವರು : ದಾಸಪ್ಪ ಹೆಗಡೆ (ಅಣ್ಣ) ಶೇಷಮ್ಮ (ಅಕ್ಕ).
ಪತ್ನಿ : ಸಂಜೀವಿನಿ.
ಮಕ್ಕಳು : ಮೂರು ಗಂಡು ಮತ್ತು ನಾಲ್ಕು ಹೆಣ್ಣು ಮಕ್ಕಳು.
ಹುಟ್ಟಿದ್ದು : ಪುತ್ತೂರಿನ ಬಪ್ಪಳಿಗೆ ಎಂಬಲ್ಲಿ.
ವಿದ್ಯಾಭ್ಯಾಸ : ಮೂರನೇ ತರಗತಿ.
ಅನುಭವ : ಸ್ವಲ್ಪ ಸಮಯ ಅರಣ್ಯ ರಕ್ಷಕನಾಗಿ.
ಕಲಾವಿದನಾಗಿ : ಕೂಡ್ಲು ಮೇಳದಲ್ಲಿ ಸುಮಾರು ಏಳೆಂಟು ವರ್ಷ, ಸುರತ್ಕಲ್ ಮೇಳದಲ್ಲಿ ಒಂದು ವರ್ಷ. ಆಮೇಲೆ ಸುಮಾರು 35 ವರ್ಷಗಳು ಧರ್ಮಸ್ಥಳ ಮೇಳದಲ್ಲಿ. ನಿಧನ: 1992
ಗಂಡು ಮಕ್ಕಳಲ್ಲಿ ಮೊದಲನೆಯವರು ಖ್ಯಾತ ಯಕ್ಷಗಾನ ಕಲಾವಿದ ದಿ|ಚಂದ್ರಶೇಖರ ಹೆಗ್ಡೆ. ಶ್ರೀ ದೇವರಾಜ ಹೆಗ್ಡೆ, ಕಲಾವಿದರೂ ಹೌದು. ಧರ್ಮಸ್ಥಳ ಎಸ್.ಡಿ.ಎಂ. ಲಾ ಕಾಲೇಜು, ಮಂಗಳೂರು ಇಲ್ಲಿ ಉದ್ಯೋಗಿ. ಶ್ರೀ ಗಿರೀಶ್ ಹೆಗ್ಡೆ, ಕಲಾವಿದರು ಮತ್ತು ಶ್ರೀ ಧರ್ಮಸ್ಥಳ ಮೇಳದ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಪುತ್ತೂರು ನಾರಾಯಣ ಹೆಗ್ಡೆಯವರ ತಾಯಿ ಗರ್ಭಿಣಿಯಾಗಿರುವಾಗಲೇ ತಂದೆ ಸುಬ್ರಾಯ ಹೆಗಡೆಯವರು ತೀರಿ ಹೋಗಿದ್ದರು. ಇವರನ್ನು ಪ್ರಸವಿಸಿದ ನಂತರ ಮೂರೇ ತಿಂಗಳಲ್ಲಿ ತಾಯಿ ಕೂಡಾ ಇಹಲೋಕವನ್ನು ತ್ಯಜಿಸಿದ್ದರು. ಅಕ್ಕ ಶೇಷಮ್ಮನ ಆರೈಕೆಯಲ್ಲೇ ನಾರಾಯಣ ಬೆಳೆಯಬೇಕಾಯಿತು. ರಾಗಿಕುಮೇರಿ ಶಾಲೆಯಲ್ಲಿ ಮೂರನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿ ಕಲಿಯುವಿಕೆಯನ್ನು ನಿಲ್ಲಿಸಬೇಕಾಗಿ ಬಂತು. ಆಮೇಲೆ ಆಟ ನೋಡುವ ಆಸಕ್ತಿ ಚಪಲಗಳಿತ್ತು. 13ನೇ ವಯಸ್ಸಿನಲ್ಲಿಯೇ ಮನೆಯವರೊಂದಿಗೆ ಮುನಿಸಿಕೊಂಡು ಮಂಗಳೂರಿನಲ್ಲಿ ಕೆಲಸಕ್ಕೆ ಸೇರಿದ್ದರು. ಆಮೇಲೆ ಕೆಲವು ಕಡೆಯಲ್ಲಿ ಫಾರೆಸ್ಟ್ ಗಾರ್ಡ್ ಆಗಿ ಕೆಲಸ ಮಾಡಿದ್ದರು. ಶಿರಾಡಿ, ನಾರಾವಿ ಇತ್ಯಾದಿ ಕಡೆಗಳಲ್ಲಿ ಕೆಲಸ ಮಾಡಿದರು. ಆಟದ ಆಸಕ್ತಿಯಿಂದ ಆಟ-ಕೂಟಗಳನ್ನು ಬಿಡದೆ ನೋಡುತ್ತಿದ್ದರು.ಯಕ್ಷಗಾನದ ಆಸಕ್ತಿಯಿಂದಾಗಿ ಪೆರ್ಣಂಕಿಲ ಮೇಳದಲ್ಲಿ ಪೆಟ್ಟಿಗೆ ಹೊರುವ ಕೆಲಸಕ್ಕೆ ಚಿಕ್ಕಪ್ಪ ದೇವಪ್ಪ ಹೆಗಡೆಯವರು ಸೇರಿಸಿದರು. ಮೇಳದ ತಿರುಗಾಟದ ನಂತರ ಪುನಃ Guard ಆಗಿ ಕೆಲಸ ಇರುತ್ತಿತ್ತು. ನಂತರ ಮೂಲ್ಕಿ ಮೇಳಕ್ಕೆ ಸೇರಿದರು. ಸಣ್ಣ ತಿಮ್ಮಪ್ಪು ಎಂಬವರ ಮಾರ್ಗದರ್ಶನ ಅವರಿಗಾಗಿತ್ತು. ಅವರ ವೇಷಗಳಲ್ಲಿ ಸಣ್ಣ ತಿಮ್ಮಪ್ಪು ಅವರ ಛಾಯೆಯಿತ್ತಂತೆ. ಆದರೆ ಕ್ರಮೇಣ ಪುತ್ತೂರು ನಾರಾಯಣ ಹೆಗ್ಡೆಯವರು ತನ್ನದೇ ಸ್ವಂತ ಶೈಲಿಯನ್ನು ರೂಢಿಸಿಕೊಂಡು ಪ್ರಸಿದ್ಧಿಯನ್ನು ಪಡೆದರು.ಮೂಲ್ಕಿ ಮೇಳದಲ್ಲಿ ಸುಮಾರು ಏಳೆಂಟು ವರ್ಷ ಕಲಾವಿದರಾಗಿ ಸೇವೆ ಸಲ್ಲಿಸಿದ್ದರು. ಕೆಲವರು ಸಮಸ್ಯೆಗಳಿಂದ ಮೂಲ್ಕಿ ಮೇಳವನ್ನು ಬಿಡಬೇಕಾಗಿ ಬಂತು. ಆಮೇಲೆ ಕಸ್ತೂರಿ ಪೈಗಳ ಕರೆಯಂತೆ ಸುರತ್ಕಲ್ ಮೇಳವನ್ನು ಸೇರಿದರು. ಆಮೇಲೆ ಪೂಜ್ಯ ಹೆಗಡೆಯವರು ಅವರನ್ನು ಧರ್ಮಸ್ಥಳ ಮೇಳಕ್ಕೆ ಕರೆಸಿಕೊಂಡರು. ಆಮೇಲೆ ಸುಮಾರು 30 ಕ್ಕೂ ಹೆಚ್ಚು ವರ್ಷಗಳಷ್ಟು ಕಾಲ ಧರ್ಮಸ್ಥಳ ಮೇಳದಲ್ಲೇ ಕಲಾ ವ್ಯವಸಾಯ ಮಾಡಿದರು. ಪುತ್ತೂರು ನಾರಾಯಣ ಹೆಗ್ಡೆಯವರು 1992ರಲ್ಲಿ ನಿಧನ ಹೊಂದಿದರು.