Saturday, August 29, 2026
Home Blog Page 46

ಹೊಸ ಉದ್ಯೋಗ ಸಿಕ್ಕಿದ್ದಕ್ಕಾಗಿ ಪಾರ್ಟಿ – ಸಾಫ್ಟ್‌ವೇರ್ ಇಂಜಿನಿಯರ್ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಸ್ನೇಹಿತರು

0


ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಮೇಲೆ ಆಕೆಯ ಬಾಲ್ಯ ಸ್ನೇಹಿತ ಸೇರಿದಂತೆ ಇಬ್ಬರು ಅತ್ಯಾಚಾರವೆಸಗಿದ್ದಾರೆ.

ಸೋಮವಾರ ತಡರಾತ್ರಿ ನಡೆದ ಪಾರ್ಟಿಯೊಂದರಲ್ಲಿ 24 ವರ್ಷದ ಸಾಫ್ಟ್‌ವೇರ್ ಉದ್ಯೋಗಿಯೊಬ್ಬಳ ಮೇಲೆ ಆಕೆಯ ಬಾಲ್ಯದ ಗೆಳೆಯ ಸೇರಿದಂತೆ ಇಬ್ಬರು ವ್ಯಕ್ತಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ವನಸ್ಥಲಿಪುರಂ ಪೊಲೀಸರು ಪ್ರಮುಖ ಆರೋಪಿ ಗೌತಮ್ ರೆಡ್ಡಿಯನ್ನು ಮಂಗಳವಾರ ಬಂಧಿಸಿದ್ದಾರೆ. 

ಪೊಲೀಸರ ಪ್ರಕಾರ, ಸೋಮವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಇತ್ತೀಚೆಗೆ ಹೊಸ ಸಾಫ್ಟ್‌ವೇರ್ ಉದ್ಯೋಗವನ್ನು ಪಡೆದ ಮಹಿಳೆ, ವನಸ್ಥಲಿಪುರಂನ ಬಾರ್ ಮತ್ತು ರೆಸ್ಟೋರೆಂಟ್‌ನಲ್ಲಿ ತನ್ನ ಖುಷಿಯನ್ನು ಆಚರಿಸಲು ತನ್ನ ಸ್ನೇಹಿತನನ್ನು ಆಹ್ವಾನಿಸಿದಳು.

ತನ್ನ ಹೊಸ ಸಾಫ್ಟ್‌ವೇರ್ ಉದ್ಯೋಗ ಸಿಕ್ಕಿದ ಸಂತೋಷವನ್ನು ಆಚರಿಸಲು ಭೇಟಿಯಾದ ವನಸ್ಥಲಿಪುರಂನ ರೆಸ್ಟೋರೆಂಟ್-ಕಮ್-ಬಾರ್‌ನಲ್ಲಿ ತನ್ನ ಬಾಲ್ಯದ ಸ್ನೇಹಿತ ಮತ್ತು ಆತನ ಸಂಬಂಧಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆಯ ದೂರಿನ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ರೆಸ್ಟೋರೆಂಟ್ ಆವರಣದ ಕೆಳಗಿರುವ ಹೋಟೆಲ್ ಕೋಣೆಗೆ ತೆರಳುವ ಮೊದಲು ರೆಸ್ಟೋರೆಂಟ್‌ನಲ್ಲಿ ತಾನು ಮತ್ತು ತನ್ನ ಸ್ನೇಹಿತ ಮದ್ಯ ಸೇವಿಸಿದ್ದೆವು ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಅಲ್ಲಿಯೇ ಆಕೆಯ ಸ್ನೇಹಿತ ಕುಡಿದ ಅಮಲಿನಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಆಕೆಯ ಸ್ನೇಹಿತನ ಸೋದರಸಂಬಂಧಿ ನಂತರ ಹೋಟೆಲ್ ಕೋಣೆಯಲ್ಲಿ ಅವರೊಂದಿಗೆ ಸೇರಿಕೊಂಡರು ಮತ್ತು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸ್ ವರದಿ ತಿಳಿಸಿದೆ.

ಅತ್ಯಾಚಾರದ ನಂತರ, ಇಬ್ಬರು ವ್ಯಕ್ತಿಗಳು ಸ್ಥಳದಿಂದ ತೆರಳಿದರು.

ನಂತರ ಮಹಿಳೆ ತನ್ನ ಸಹೋದರನನ್ನು ಸಂಪರ್ಕಿಸಿ ಘಟನೆಯ ಬಗ್ಗೆ ತಿಳಿಸಿದ್ದಾಳೆ.

ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆಕೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಯುವತಿಯ ಸ್ನೇಹಿತನನ್ನು ಬಂಧಿಸಲಾಗಿದೆ. ಇನ್ನೊಬ್ಬನಿಗಾಗಿ ಶೋಧಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಕ್ಷಗಾನ ಕಲಾವಿದ ಗುರುಪ್ರಸಾದ್ ನೀರ್ಜೆಡ್ಡು ಆತ್ಮಹತ್ಯೆ

ಯಕ್ಷಗಾನ ಕಲಾವಿದ ಗುರುಪ್ರಸಾದ್ ನೀರ್ಜೆಡ್ಡು ನಿಧನ.
ಉಡುಪಿ : ಮಂದಾರ್ತಿ, ಮಡಾಮಕ್ಕಿ, ಸಾಲಿಗ್ರಾಮ, ಅಮೃತೇಶ್ವರೀ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈಯುತ್ತಿದ್ದ ಗುರುಪ್ರಸಾದ್ ನೀರ್ಜೆಡ್ಡು (26 ವರ್ಷ) ನಿನ್ನೆ (30.07.2024) ನಿಧನ ಹೊಂದಿದರು.

ಅವರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಬಲ್ಲ ಮೂಲ ತಿಳಿದುಬಂದಿದೆ.

ಮಂದಾರ್ತಿ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹಾರಾಡಿ ರಮೇಶ ಗಾಣಿಗರಿಂದ ಯಕ್ಷಗಾನ ನೃತ್ಯಭ್ಯಾಸ ಮಾಡಿದ ಭರವಸೆಯ ಕಲಾವಿದರಾಗಿದ್ದ ಇವರು ಮುಂದಿನ ತಿರುಗಾಟಕ್ಕೆ ಹಾಲಾಡಿ ಮೇಳಕ್ಕೆ ನೇಮಕಗೊಂಡಿದ್ದರು.

ಮೃತರು ತಾಯಿ, ತಮ್ಮ ಹಾಗೂ ಅಭಿಮಾನಿ ಬಳಗವನ್ನ ಅಗಲಿದ್ದಾರೆ.

ನಾಳೆ ದಿನಾಂಕ 31.07.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ನಾಳೆ ದಿನಾಂಕ 31.07.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಹಾಗೂ ಪ.ಪೂ ಕಾಲೇಜುಗಳಿಗೆ ನಾಳೆ ದಿನಾಂಕ ಜುಲೈ 31 ಬುಧವಾರ ದ.ಕ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿ ಆದೇಶ ನೀಡಿದರು.

ನಾಳೆ ದಿನಾಂಕ 31.07 2024ರ ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಭಾರೀ ಮಳೆಯ ಸಂಭಾವ್ಯತೆ ಇರುವುದರಿಂದ ಹಾಗೂ ಸಂಭಾವ್ಯ ಭೂಕುಸಿತಗಳನ್ನು ಗಮನದಲ್ಲಿಟ್ಟುಕೊಂಡು ಈ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕಛೇರಿಯ ಪ್ರಕಟಣೆಯಿಂದ ತಿಳಿದುಬಂದಿದೆ.

ಶ್ರೀರಾಮ ದರ್ಶನ – ಇಂದು ತಾಳಮದ್ದಳೆ

ಇಂದು ಎಡನೀರು ಮಠದಲ್ಲಿ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.

ಶ್ರೀ ಶ್ರೀ ಸಚ್ಚಿದಾನಂದಭಾರತೀ ಸ್ವಾಮೀಜಿಯವರ ಚತುರ್ಥ ಚಾತುರ್ಮಾಸ್ಯದ ಪ್ರಯುಕ್ತ ಈ ತಾಳಮದ್ದಳೆ ಸೇವೆ ಸಂಜೆ 6 ಘಂಟೆಗೆ ಆರಂಭವಾಗಲಿದೆ.

ವಿವರಗಳಿಗೆ ಕೆಳಗಿನ ಚಿತ್ರವನ್ನು ನೋಡಿ.

ಪುತ್ತಿಗೆ ರಘುರಾಮ ಹೊಳ್ಳರಿಗೆ ಅಗರಿ ಪ್ರಶಸ್ತಿ ಮತ್ತು ಯಕ್ಷಗಾನ ಕಲಾರಂಗಕ್ಕೆ ಆಗರಿ ರಘುರಾಮ ಸಮ್ಮಾನ

ಪುತ್ತಿಗೆ ರಘುರಾಮ ಹೊಳ್ಳರಿಗೆ ಅಗರಿ ಪ್ರಶಸ್ತಿ ಮತ್ತು ಯಕ್ಷಗಾನ ಕಲಾರಂಗಕ್ಕೆ ಆಗರಿ ರಘುರಾಮ ಸಮ್ಮಾನ

ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತರೂ ಪ್ರಸಂಗಕರ್ತರೂ ಆಗಿದ್ದ ಅಗರಿ ಶ್ರೀನಿವಾಸ ಭಾಗವತರ ನೆನಪಿನಲ್ಲಿ ನೀಡುವ ಅಗರಿ ಪ್ರಶಸ್ತಿ ಹಾಗು ಅವರ ಸುಪುತ್ರರೂ ಶ್ರೇಷ್ಠ ಭಾಗವತರೂ ಆಗಿದ್ದ ಅಗರಿ ರಘುರಾಮ ಭಾಗವತರ ನೆನಪಿನಲ್ಲಿ ನೀಡುವ ಅಗರಿ ಸಮ್ಮಾನ ಪ್ರದಾನ ಕಾರ್ಯಕ್ರಮ ಹೊಸಬೆಟ್ಟಿನ ನವಗಿರಿ ಕಲ್ಯಾಣ ಮಂಟಪದಲ್ಲಿ ಜುಲೈ 28ರಂದು ಜರಗಿತು.

ಅಗರಿ ಪ್ರಶಸ್ತಿಯನ್ನು ಹಿರಿಯ ಭಾಗವತ ಪುತ್ತಿಗೆ ರಘುರಾಮ ಹೊಳ್ಳರು ಸ್ವೀಕರಿಸಿದರು. ಉಡುಪಿಯ ಯಕ್ಷಗಾನ ಕಲಾರಂಗದ ಸಾಂಸ್ಕೃತಿಕ, ಸಾಮಾಜಿಕ ಚಟುವಟಿಕೆಯನ್ನು ಗುರುತಿಸಿ ನೀಡಲಾದ ಅಗರಿ ಸಮ್ಮಾನವನ್ನು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವೀಕರಿಸಿದರು.

ಕಟೀಲು ಕ್ಷೇತ್ರದ ಹರಿನಾರಾಯಣ ದಾಸ ಅಸ್ರಣ್ಣರು, ಶ್ರೀಪತಿ ಭಟ್, ಅಗರಿ ರಾಘವೇಂದ್ರ ರಾವ್, ಸುಮಂಗಲ ರತ್ನಾಕರ್, ವಾದಿರಾಜ ಕಲ್ಲುರಾಯ, ಕೃಷ್ಣಪ್ರಕಾಶ್ ಉಳಿತ್ತಾಯ ಮುಂತಾದ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನೆರವೇರಿತು.

ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್, ಜತೆ ಕಾರ್ಯದರ್ಶಿಗಳಾದ ನಾರಾಯಣ ಎಂ. ಹೆಗಡೆ, ಎಚ್.ಎನ್. ಶೃಂಗೇಶ್ವರ ಉಪಸ್ಥಿತರಿದ್ದರು.