Saturday, August 29, 2026
Home Blog Page 84

ಸರ್ಪಂಗಳ ಯಕ್ಷೋತ್ಸವ – ಅಂಬಾಪ್ರಸಾದ್‌ ಪಾತಾಳ ಅವರಿಗೆ ಸರ್ಪಂಗಳ ಸುಬ್ರಹ್ಮಣ್ಯ ಭಟ್‌ ಯಕ್ಷಗಾನ ಕಲಾಸಾಧಕ ಪ್ರಶಸ್ತಿ

ಕಲೆಯ ಬೆಳವಣಿಗೆಯಲ್ಲಿ ಕಲಾವಿದರಷ್ಟೇ ಪ್ರೇಕ್ಷಕರೂ ಮುಖ್ಯ’
ಸೋದೆ ಶ್ರೀಗಳು

‘ಯಕ್ಷಗಾನ ಕೇವಲ ಮನೋರಂಜನೆಗಾಗಿ ಇರುವ ಕಲೆಯಲ್ಲ. ಅದರಿಂದ ವ್ಯಕ್ತಿತ್ವದ ವಿಕಸನವಾಗುತ್ತದೆ, ನಾವು ಆರಾಧಿಸುವ ದೇವರ ಕಥನಗಳನ್ನು ಅರಿಯುವ ಅವಕಾಶವಾಗುತ್ತದೆ, ಯಕ್ಷಗಾನ ವೀಕ್ಷಿಸುವ ಸಾಮಾಜಿಕರಲ್ಲಿ ಸಂಸ್ಕಾರ ವೃದ್ಧಿಯಾಗುತ್ತದೆ. ಇಂಥ ಯಕ್ಷಗಾನಗಳನ್ನು ಸಂಘಟಿಸಿ, ಯಕ್ಷಗಾನ ಕಲಾವಿದರನ್ನು ಸಂಮಾನಿಸುವುದು ಪುಣ್ಯಪ್ರದವಾದ ಕಾರ್ಯವಾಗಿದೆ.

ಯಕ್ಷಗಾನದ ಬೆಳವಣಿಗೆಯಲ್ಲಿ ಪ್ರೇಕ್ಷಕರು ಕಲಾವಿದರಷ್ಟೇ ಮುಖ್ಯ’ ಎಂದು ಶ್ರೀಸೋದೆ ವಾದಿರಾಜ ಮಠಾಧೀಶ ಶ್ರೀಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು ಹೇಳಿದರು. ಅವರು, 7 ಅಕ್ಟೋಬರ್‌ 2023 ರಂದು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಜರಗಿದ ‘ಸರ್ಪಂಗಳ ಯಕ್ಷೋತ್ಸವ’ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವಹಿಸಿ ಮಾತನಾಡುತ್ತಿದ್ದರು.

ಹಿರಿಯ ಸ್ತ್ರೀವೇಷಧಾರಿ ಅಂಬಾಪ್ರಸಾದ್‌ ಪಾತಾಳ ಅವರಿಗೆ ಸರ್ಪಂಗಳ ಸುಬ್ರಹ್ಮಣ್ಯ ಭಟ್‌ ಯಕ್ಷಗಾನ ಕಲಾಸಾಧಕ ಪ್ರಶಸ್ತಿಯನ್ನು ಮತ್ತು ಚತುರ ಚಕ್ರತಾಳ ವಾದಕ ಬೆಳ್ತಂಗಡಿ ಕೃಷ್ಣ ಶೆಟ್ಟಿ ಅವರಿಗೆ ಸರ್ಪಂಗಳ ಯಕ್ಷಗಾನ ಕಲಾಸೇವಾ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು. ಸಂಮಾನ ಸ್ವೀಕರಿಸಿ ಮಾತನಾಡಿದ ಅಂಬಾಪ್ರಸಾದ ಪಾತಾಳ ಅವರು ಪ್ರಶಸ್ತಿಯನ್ನು ನೀಡಿದ ಸರ್ಪಂಗಳ ಕುಟುಂಬಕ್ಕೆ ಮತ್ತು ಯಕ್ಷಗಾನ ಕಲಾರಂಗ ಸಂಸ್ಥೆಗೆ ಕೃತಜ್ಞತೆ ಹೇಳಿದರು.

ಕೀರ್ತಿಶೇಷರಾಗಿರುವ ಸರ್ಪಂಗಳ ಸುಬ್ರಹ್ಮಣ್ಯ ಭಟ್ಟರನ್ನು ನೆನಪಿಸಿಕೊಂಡ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್‌ ಅವರು, ‘ಸರ್ಪಂಗಳ ಸುಬ್ರಹ್ಮಣ್ಯ ಭಟ್ಟರು ಯಕ್ಷಗಾನವೂ ಸೇರಿದಂತೆ ಎಲ್ಲ ಕಲೆಗಳನ್ನು ಸದ್ದಿಲ್ಲದೆ ಪ್ರೋತ್ಸಾಹಿಸುತ್ತ ಬಂದವರು.

ಅವರು ಮಾಡಿದ ಸತ್ಕಾರ್ಯಗಳಿಂದಾಗಿ ಅವರ ನೆನಪು ಈಗಲೂ ನಮ್ಮ ನಡುವೆ ಜೀವಂತವಾಗಿದೆ. ಅವರ ಪತ್ನಿ ಮತ್ತು ಮಕ್ಕಳು ಕಳೆದ ಹನ್ನೆರಡು ವರ್ಷಗಳಿಂದ ಆಯೋಜಿಸುತ್ತ ಬಂದಿರುವ ಸರ್ಪಂಗಳ ಯಕ್ಷೋತ್ಸವ-2023ವು ಅವರ ನಿಜವಾಗಿ ಆತ್ಮಸಂತೃಪ್ತಿ ಉಂಟುಮಾಡುತ್ತಿರಬೇಕು’ ಎಂದರು.

ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್‌, ಸರ್ಪಂಗಳ ಯಕ್ಷೋತ್ಸವದ ಆಯೋಜಕರಾದ ನಳಿನಿ ಸುಬ್ರಹ್ಮಣ್ಯ ಭಟ್‌, ಡಾ. ಶೈಲಜಾ ಎಸ್‌., ಡಾ. ನರೇಂದ್ರ ಶೆಣೈ, ಅನಿರುದ್ಧ, ಆವಂತಿಕಾ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ತೆಂಕು ತಿಟ್ಟಿನ ಪ್ರಸಿದ್ಧ ಕಲಾವಿದರಿಂದ “ಸಹಸ್ರಕರ” ಯಕ್ಷಗಾನ ಸೊಗಸಾಗಿ ಪ್ರಸ್ತುತಗೊಂಡಿತು.

ಖ್ಯಾತ ಸ್ತ್ರೀವೇಷಧಾರಿ ಮೂರೂರು ವಿಷ್ಣುಭಟ್ ನಿಧನ

ಬಡಗು ನಿಟ್ಟಿನ ಪ್ರಸಿದ್ಧ ಸ್ತ್ರೀವೇಷಧಾರಿ ಮೂರೂರು ವಿಷ್ಣುಭಟ್ (65) ಇಂದು ಉತ್ತರ ಕನ್ನಡದ ಸಿದ್ಧಾಪುರದಲ್ಲಿ ನಿಧನ ಹೊಂದಿದರು.

ಗುಂಡುಬಾಳ, ಅಮೃತೇಶ್ವರೀ, ಹಿರೇಮಹಾಲಿಂಗೆಶ್ವರ, ಶಿರಸಿ, ಪೆರ್ಡೂರು, ಮಂದಾರ್ತಿ, ಸಾಲಿಗ್ರಾಮ, ಪೂರ್ಣಚಂದ್ರ ಮೇಳಗಳಲ್ಲಿ ನಾಲ್ಕು ದಶಕಗಳ ಕಲಾ ಸೇವೆ ಗೈದಿದ್ದರು. ದಾಕ್ಷಯಿಣಿ, ಸೀತೆ, ಅಂಬೆ, ಚಂದ್ರಮತಿ, ದಮಯಂತಿ ಮೊದಲಾದ ಪೌರಾಣಿಕ ಪಾತ್ರಗಳನ್ನು ಅನನ್ಯವಾಗಿ ಚಿತ್ರಿಸಿದ್ದರು.

ತಮ್ಮ ಭಾವಪೂರ್ಣ ಅಭಿನಯ, ಮಾತುಗಾರಿಕೆಯಿಂದ ಅಪಾರ ಸಂಖ್ಯೆಯ ಅಭಿಮಾನಿಗಳ ಪ್ರೀತ್ಯಾದರಕ್ಕೆ ಪಾತ್ರರಾಗಿದ್ದರು. ಯಕ್ಷಗಾನ ಕಲಾರಂಗ ಪ್ರಶಸ್ತಿ, ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕರಗಳಿಗೆ ಭಾಜನರಾಗಿದ್ದರು.

ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ.ಅವರ ನಿಧಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ 1 ಭಾನುವಾರ ಪಡುಬಿದ್ರಿ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ವಠಾರದಲ್ಲಿ ತರಂಗಿಣಿ ಯಕ್ಷೋತ್ಸವ 2023

ಅಕ್ಟೋಬರ್ 1 ಭಾನುವಾರ ಪಡುಬಿದ್ರಿ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ವಠಾರದಲ್ಲಿ ತರಂಗಿಣಿ ಯಕ್ಷೋತ್ಸವ 2023 ನಡೆಯಲಿದೆ.

ಹೆಚ್ಚಿನ ವಿವರಗಳಿಗೆ ಚಿತ್ರ ಚಿತ್ರವನ್ನು ನೋಡಿ

ಅಕಾಡೆಮಿ ಮಾಡಬೇಕಿರುವ ಕೆಲಸ ಸಿರಿಬಾಗಿಲು ಪ್ರ-ತಿಷ್ಠಾನದಿಂದಾಗುತ್ತಿದೆ: ಶ್ರೀಕರ ಭಟ್ – ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಯಕ್ಷಮಾರ್ಗ-1 ಯಕ್ಷಗಾನ ನೃತ್ಯ ಪ್ರಾತ್ಯಕ್ಷಿಕೆ

0

ಕಾಸರಗೋಡು: ಯಕ್ಷಗಾನ ಕಲಾವಿದರಿಗೆ ಸಮಗ್ರ ಮಾಹಿತಿ ಇರುವ ತೆಂಕು ತಿಟ್ಟು ಯಕ್ಷಮಾರ್ಗ ಸರಣಿಯ ಮೊದಲ ಪ್ರಾತ್ಯಕ್ಷಿಕೆಯನ್ನು ಹಿರಿಯ ಯಕ್ಷಗಾನ ಗುರುಗಳಾದ ಕರ್ಗಲ್ಲು ವಿಶ್ವೇಶ್ವರ ಭಟ್ ಅವರು ಗುರುವಾರ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ನಡೆಸಿಕೊಟ್ಟರು.

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಯಕ್ಷಗಾನ ಕಲಾಪೋಷಕ ಶ್ರೀಕರ ಭಟ್ ಮುಂಡಾಜೆ, ‘ಈಗಿನ ಯಕ್ಷಗಾನ ಹಾದಿ ತಪ್ಪುತ್ತಿದೆ. ಯಕ್ಷಗಾನ ಪ್ರದರ್ಶನಕ್ಕೂ ನಿಯಂತ್ರಕ ಶಕ್ತಿ ಬೇಕು. ಭಾಗವತರು ನಿರ್ದೇಶಕರು, ಆದರೆ ಅವರಿಗೆ ಹೇಳಲು ದಾಕ್ಷಿಣ್ಯ. ಈ ಕಾರಣದಿಂದಾಗಿ ಯಕ್ಷಗಾನದ ಸತ್ವ ಕ್ಷೀಣಿಸುತ್ತಿದೆ. ಜೊತೆಗೆ, ಯಕ್ಷಗಾನ ಆಡಿಸುವವರು ಕೂಡ “ಬಹುಜನರ ಅಪೇಕ್ಷೆ ಮೇರೆಗೆ” ಎಂದು ಪ್ರೇಕ್ಷಕರ ಮೇಲೆಯೇ ಎಲ್ಲವನ್ನೂ ಹಾಕಿ ನುಣುಚಿಕೊಳ್ಳುತ್ತಾರೆ’ ಎಂದು ವಿಷಾದಿಸಿದರು.

‘ಅಕಾಡೆಮಿಯೊಂದು ಮಾಡಬೇಕಿರುವ ಕಾರ್ಯಕ್ರಮವನ್ನು ಸಿರಿಬಾಗಿಲು ರಾಮಕೃಷ್ಣ ಮಯ್ಯರು ಮಾಡುತ್ತಿದ್ದಾರೆ. ಈಗ ಸಮಯವಿದ್ದರೂ ವ್ಯವಧಾನವಿಲ್ಲದ ಈ ಕಾಲದಲ್ಲಿ, ಸಿರಿಬಾಗಿಲು ಪ್ರತಿಷ್ಠಾನವು ಮಾಡುತ್ತಿರುವ ದಾಖಲೀಕರಣಗಳು ಕಲಾವಿದರಿಗೆ ಸದಾ ಕಾಲಕ್ಕೂ ಪ್ರಯೋಜನಕರ’ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಭಾಗವತ ದಿನೇಶ್ ಅಮ್ಮಣ್ಣಾಯ ಅವರು ಮಾತನಾಡಿ, ‘ಯಕ್ಷಗಾನವೊಂದು ಚೌಕಟ್ಟಿನ ಆಧಾರದಲ್ಲಿರುವ ಕಲೆಯಾಗಿದ್ದು, ಆ ಚೌಕಟ್ಟು ಮೀರಿ ಹೋಗಬಾರದು, ಇದು ಗುರು ಪರಂಪರೆಯನ್ನು ಬೆಳೆಸಿದ ಕಲೆ’ ಎಂದರಲ್ಲದೆ, ‘ಈಗಿನ ಗಾನವೈಭವ ಅಥವಾ ನಾಟ್ಯವೈಭವಗಳು ಒಂದು ಕಮ್ಮಟವಾಗಿ ಬದಲಾಗಬೇಕು. ಅದರಿಂದಲೇ ಹೊಸ ಕಲಾವಿದರು ಯಕ್ಷಗಾನಕ್ಕೆ ಸಂಬಂಧಿಸಿದಂತೆ ಏನನ್ನಾದರೂ ಕಲಿಯುವಂತಿರಬೇಕು’ ಎಂದು ಅಭಿಪ್ರಾಯಪಟ್ಟರು.

ಯಕ್ಷಗಾನ ಹೇಗಿತ್ತು, ಅದರಲ್ಲಿ ಏನೆಲ್ಲ ಮಾರ್ಪಾಟು ಮಾಡಬಹುದು ಎಂಬುದನ್ನೆಲ್ಲ ಮನದಟ್ಟು ಮಾಡಿಸಿ, ಮುಂದಿನ ಪೀಳಿಗೆಗೆ ದಾಟಿಸುವ ಸಿರಿಬಾಗಿಲು ಪ್ರತಿಷ್ಠಾನದ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದು ಅಮ್ಮಣ್ಣಾಯರು ಹೇಳಿದರು.

ಅತಿಥಿಗಳಾಗಿ ಕಲಾಪೋಷಕ, ಅಮೆರಿಕದ ನಿವಾಸಿ ವಾಸುದೇವ ಐತಾಳ್ ಪಣಂಬೂರು, ಕಲಾವಿದ, ದುಬೈ ನಿವಾಸಿ ಶೇಖರ ಡಿ.ಶೆಟ್ಟಿಗಾರ್ ಕಿನ್ನಿಗೋಳಿ ಅವರು ಶುಭ ಹಾರೈಸಿದರು. ಗುರುಗಳಾದ ಕರ್ಗಲ್ಲು ವಿಶ್ವೇಶ್ವರ ಭಟ್ ಅವರನ್ನು ಕಾರ್ಯಕ್ರಮದ ಸಂಯೋಜಕರಾದ ರಾಮಕೃಷ್ಣ ಮಯ್ಯ ಸಿರಿಬಾಗಿಲು ಅವರು ಪ್ರತಿಷ್ಠಾನದ ಪರವಾಗಿ ಗೌರವಿಸಿದರು. ಕಲಾವಿದ, ನಾಟ್ಯಗುರು ಲಕ್ಷ್ಮಣ ಕುಮಾರ್ ಮರಕಡ ಅವರು ಕಾರ್ಯಕ್ರಮ ನಿರ್ವಹಿಸಿದರು.

ಸಭಾ ಕಾರ್ಯಕ್ರಮದ ಬಳಿಕ, ಕರ್ಗಲ್ಲು ವಿಶ್ವೇಶ್ವರ ಭಟ್ ಅವರು ಶಾಸ್ತ್ರೀಯ ಚೌಕಟ್ಟಿನಲ್ಲಿ ಯಕ್ಷಗಾನದ ನಾಟ್ಯ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಪ್ರಾತ್ಯಕ್ಷಿಕೆಯನ್ನು ಹಿರಿಯ ಕಲಾವಿದ ಶಂಭಯ್ಯ ಕಂಜರ್ಪಣೆ ನಿರ್ವಹಿಸಿದರು. ಆರಾಧನಾ ಕಲೆಯಾದ ಯಕ್ಷಗಾನವು ಜನಪದವಾಗಿ, ಜಾನಪದೀಯವಾಗಿ ಮತ್ತು ಶಾಸ್ತ್ರೀಯತೆಯ ಚೌಕಟ್ಟು ಸೃಷ್ಟಿಸಿಕೊಂಡು ವಿಕಾಸಗೊಂಡ ಬಗೆಯನ್ನು ಅವರು ವಿವರಿಸಿದರು.

ಯಕ್ಷಗಾನದಲ್ಲಿ ವಂದನೆ, 6 ವಿಧದ ಪಾದ-ಘಾತಗಳು, ಗತಿಗಳು, ತಿತ್ತಿತೈ ಹೆಜ್ಜೆಗಳ ವಿವರಣೆ, ನೃತ್ತ, ನೃತ್ಯ, ನಾಟ್ಯದ ವ್ಯತ್ಯಾಸಗಳು, 7 ವಿಧದ ಮೂಲಭೂತ ಹೆಜ್ಜೆಗಳ ವಿವರಣೆ, ಚಲನೆ-ಸ್ಥಿತಿಗಳನ್ನು ಪ್ರಸ್ತುತಪಡಿಸಿದರು. ದೇಸೀ ಕಲೆಯಾದ ಯಕ್ಷಗಾನವನ್ನು ಶಾಸ್ತ್ರೀಯವಾಗಿ ವಿಕಾಸವಾಗಿಲು ಅವಕಾಶಗಳ, ಸಾಧ್ಯತೆಗಳ ಅಗಾಧತೆಯನ್ನು ಅವರು ತೆರೆದಿಟ್ಟರು. ಜೊತೆಗೆ, ಪೂರ್ವರಂಗದ ಮಹತ್ವವೇನೆಂಬುದನ್ನು ಖಚಿತವಾಗಿ ವಿವರಿಸಿದರು. ಬಳಿಕ ಪ್ರೇಕ್ಷಕರೊಂದಿಗೆ ಸಂವಾದ ಜರುಗಿತು.

ಕಡಬದ್ವಯ ಸಂಸ್ಮರಣ ಯಕ್ಷಗಾನ ಪ್ರಶಸ್ತಿ, ಯಕ್ಷ ಗಾನ ನಾಟ್ಯ ವೈಭವ, ತಾಳಮದ್ದಳೆ – ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿಯವರಿಗೆ ಕಡಬದ್ವಯ ಪ್ರಶಸ್ತಿ

0

ಈ ಬಾರಿಯ ಕಡಬದ್ವಯ ಸಂಸ್ಮರಣ ಯಕ್ಷಗಾನ ಪ್ರಶಸ್ತಿ ಪ್ರದಾನ ಸಮಾರಂಭ 29-10-2023ನೇ ಆದಿತ್ಯವಾರ ಮುಂಬಯಿಯ ಗೋರೆಗಾಂವ್ ನಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದ ಜೊತೆಗೆ ಯಕ್ಷ ಗಾನ ನಾಟ್ಯ ವೈಭವ, ತಾಳಮದ್ದಳೆ ಕಾರ್ಯಕ್ರಮಗಳ ರಸದೌತಣ ಸಿಗಲಿದೆ.

ಈ ಬಾರಿಯ ಕಡಬದ್ವಯ ಸಂಸ್ಮರಣ ಪ್ರಶಸ್ತಿಯನ್ನು ತೆಂಕುತಿಟ್ಟಿನ ಖ್ಯಾತ ಭಾಗವತರಾದ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿಯವರಿಗೆ ನೀಡಿ ಗೌರವಿಸಲಾಗುವುದು.

ವಿವರಗಳಿಗೆ ಕರಪತ್ರದ ಚಿತ್ರಗಳನ್ನು ನೋಡಿ.

ವಿಶಿಷ್ಟರಂಗ ಸಂಯೋಜನೆಯಲ್ಲಿ ಚಕ್ರವ್ಯೂಹ

0

ಶ್ರೀಮದ್ ಎಡನೀರು ಮಠದಲ್ಲಿ ಸಿರಿ ಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಂಯೋಜನೆಯಲ್ಲಿ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ತೃತೀಯ ಚಾತುರ್ಮಾಸ್ಯ ಪ್ರಯುಕ್ತ ವಿಶಿಷ್ಟರಂಗ ಸಂಯೋಜನೆಯಲ್ಲಿ ಚಕ್ರವ್ಯೂಹ ಎಂಬ ಯಕ್ಷಗಾನ ಪ್ರದರ್ಶನ ನಡೆಯಿತು.

ಯಕ್ಷಗಾನೀಯ ಹಲವು ಚಟುವಟಿಕೆಗಳ ಕೇಂದ್ರ ಬಿಂದುವಾಗಿರುವ ಸಿರಿ ಬಾಗಿಲು ಪ್ರತಿಷ್ಠಾನದ ಈ ಅಪರೂಪದ ಕಾರ್ಯಕ್ರಮ ವು ಸೇರಿದ ಪ್ರೇಕ್ಷಕವನ್ನು ಸರಿ ಹಿಡಿದವು.

ಥಿಯೇಟರ್ ಯಕ್ಷ (ರಿ) ಸಂಸ್ಥೆ ಪೃಥ್ವಿರಾಜ್ ಕವತ್ತಾರ್ ನೇತೃತ್ವದಲ್ಲಿ ಈ ಪ್ರದರ್ಶನಕ್ಕೆ ನಿರ್ದೇಶಿಸಿದರು.

ತೆಂಕುತಿಟ್ಟು ಯಕ್ಷಮಾರ್ಗ -1 – ಕರ್ಗಲ್ಲು ವಿಶ್ವೇಶ್ವರ ಭಟ್ಟರಿಂದ ಪ್ರಾತ್ಯಕ್ಷಿಕೆ

0

ತೆಂಕುತಿಟ್ಟು ಯಕ್ಷಮಾರ್ಗ -1 ನಿರಂತರ ಚಟುವಟಿಕೆಗಳು ಕೇಂದ್ರಬಿಂದುವಾದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ, ಸಾಂಸ್ಕೃತಿಕ ಭವನದಲ್ಲಿ ಸೆಪ್ಟೆಂಬರ್ 28ರಂದು ಸಂಜೆ 4:00ಗೆ ಗಂಟೆಗೆ ತೆಂಕುತಿಟ್ಟು ಯಕ್ಷಮಾರ್ಗ -೧ ಕಾರ್ಯಕ್ರಮ ನಡೆಯಲಿದೆ.

ಇಂದು ಯುವ ಪೀಳಿ ಯು ಯಕ್ಷಗಾನದತ್ತ ಆಸಕ್ತಿಯಿಂದ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಯಕ್ಷಗಾನ ನಾಟ್ಯದ ವಿಶೇಷತೆ ಏನು? ಘನತೆ ಏನು? ಶಾಸ್ತ್ರೀಯತೆ ,ಎಂಬಿತ್ಯಾದಿ ವಿಚಾರವಾಗಿ ನಾಟ್ಯದ ಸೂಕ್ಷ್ಮತೆ ಮೂಲಪಾಠ, ಸಪ್ತ ತಾಳಗಳ ನಾಟ್ಯ ವೈಶಿಷ್ಟ್ಯ, ಇತ್ಯಾದಿಗಳ ಬಗ್ಗೆ ಶಾಸ್ತ್ರೀಯವಾಗಿ ಯಕ್ಷಗಾನದ ಹಿರಿಯ ಗುರುಗಳಾದ ಶ್ರೀ ಕರ್ಗಲ್ಲು ವಿಶ್ವೇಶ್ವರ ಭಟ್ ತೆಂಕುತಿಟ್ಟು ಯಕ್ಷಗಾನದ ಶಾಸ್ತ್ರೀಯ ನಾಟ್ಯ ಗುರುಗಳು ಇವರಿಂದ ಪ್ರಾತ್ಯಕ್ಷಿಕೆ ನಡೆಯಲಿದೆ.

ಇಂದಿನ ಯಕ್ಷಗಾನದ ನಾಟ್ಯ ಶಿಕ್ಷಕರು, ಹವ್ಯಾಸಿ ಕಲಾವಿದರು, ವೃತ್ತಿ ಕಲಾವಿದರು, ಅಭ್ಯಸಿಸುವ ವಿದ್ಯಾರ್ಥಿಗಳು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರತಿಷ್ಠಾನದ ವಿನಮ್ರ ವಿನಂತಿ.

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಉಚಿತ ವೈದ್ಯಕೀಯ ಶಿಬಿರ ಉದ್ಘಾಟಿಸಿದ ಡಾ.ಬಿ.ಯಸ್. ರಾವ್

0

ಕೆ.ಯಂ.ಸಿ.ಹಾಸ್ಪಿಟಲ್ ಅತ್ತಾವರ ಮಂಗಳೂರು ಇವರ ನೇತೃತ್ವದಲ್ಲಿ ಸಾಂಸ್ಕೃತಿಕ ಕ್ಷೇತ್ರದ ಜನಪ್ರಿಯ ಸಂಸ್ಥೆಯಾದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಉಚಿತ ವೈದ್ಯಕೀಯ ತಪಾಸಣೆ ನಡೆಯಿತು. ಗಡಿನಾಡು ಕಾಸರಗೋಡಿನ ಹಿರಿಯ ವೈದ್ಯ ಡಾ. ಬಿ.ಯಸ್. ರಾವ್ ಅವರು ದೀಪಬೆಳಗಿಸಿ ಉದ್ಘಾಟಿಸಿ ಗ್ರಾಮೀಣ ಪ್ರದೇಶದ ಜನರಲ್ಲಿ ಆರೋಗ್ಯ ದ ಬಗ್ಗೆ ಜಾಗೃತಿ ಮೂಡಿಸುವ ಶಿಬಿರ ನಡೆಸುತ್ತಿರುವ ಕೆ.ಯಂ.ಸಿ.ಯವರ ಕಾರ್ಯ ಸ್ತುತ್ಯರ್ಹ ವೆಂದರು.

ಸಾಂಸ್ಕೃತಿಕ ವಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ ಪ್ರತಿಷ್ಠಾನ ತನ್ನ ಸಾಂಸ್ಕೃತಿಕ ಕ್ಷೇತ್ರದ ಹೊರತಾದ ಚಟುವಟಿಕೆ ಮೆಚ್ಚುವಂತಹದು. ಈ ಹಿಂದೆ ಕೊವಿಡ್ ಸಮಯದಲ್ಲೂ ಪ್ರತಿಷ್ಠಾನವು ಕೊರೋನಾ ಯಕ್ಷಗಾನದ ಮೂಲಕ ಸಮಾಜಕ್ಕೆ ಜಾಗೃತಿ ಮೂಡಿಸಿ ವಿಶ್ವ ಆರೋಗ್ಯ ಸಂಸ್ಥೆಯ ಮೆಚ್ಚುಗೆಗೆ ಪಾತ್ರರಾದುದನ್ನು ನೆನಪಿಸಿದರು.


ಕೆ.ಯಂ.ಸಿ.ಯ ಕ್ಯಾನ್ಸರ್ ತಜ್ಞ ವ್ಯೆದ್ಯರಾದ ಡಾ.ಅಭಿಷೇಕ್ ಕೃಷ್ಣ ಅವರು ಕ್ಯಾನ್ಸರ್ ಕುರಿತಾದ ಮಾಹಿತಿ ನೀಡಿದರು. ನಾಗರಿಕರು ದುಶ್ಟಟ ದಿಂದ ಮುಕ್ತರಾಗಿ , ಹಿತ ಮಿತವಾದ ಆಹಾರ ಸೇವನೆ ಯಿಂದ ಆರೋಗ್ಯ ವಂತರಾಗಿರಿ. ಕ್ಯಾನ್ಸರ್ ರೋಗಿಗಳು ಭಯ ಪಡ ಬೇಕಾಗಿಲ್ಲ. ಈಗ ರೋಗ ಲಕ್ಷಣಗಳು ಯಾವ ಹಂತದಲ್ಲಿದ್ದರೂ ಈಗ ಗುಣಪಡಿಸಬಹುದು.


ಕೆ.ಯಂ. ಸಿ.ಯ ಶಿಬಿರದ ಸಂಘಟಕ ಉದಯ ಭಟ್ ರವರು ಈ ಹಿಂದೆ ನಡೆಸಿದ ಹಲವು ಶಿಬಿರ,ಅದರಿಂದ ನಾಗರಿಕರಿಗಾದ ಪ್ರಯೋಜನಗಳು ವಿವರಿಸಿದರು. ಮಣಿಪಾಲ ಕೆ.ಯಂ. ಸಿ.ಯ ನೇತ್ರ ತಜ್ಞೆ ಡಾ.ಶೈಲಜಾ, ಮಂಗಳೂರಿನ ಡಾ. ನಾರಾಯಣ ಮಧೂರು. ಡಾ.ರಾಜಾರಾಮ ದೇವಕಾನ, ಶಿವನಾರಾಯಣ ಗೆಳೆಯರ ವಾಟ್ಸಾಪ್ ಬಳಗದ ಅಧ್ಯಕ್ಷರಾದ ಶ್ರೀ ವಾಸುದೇವ ಕಾರಂತ ಉಪಸ್ಥತರಿದ್ದರು.


ಶಿವನಾರಾಯಣ ಗೆಳೆಯರ ವಾಟ್ಸಾಪ್ ಬಳಗದ ವತಿಯಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ ಬೃಹತ್ ಮೊತ್ತದ ಪಾತ್ರೆ ಸಾಮಗ್ರಿಗಳನ್ನು ಬಳಗದ ಸದಸ್ಯರು ಜತೆ ಗೂಡಿ ಡಾ.ಬಿ.ಯಸ್. ರಾವ್ ಮುಖಾಂತರ ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಸಿರಿಬಾಗಿಲು ಇವರಿಗೆ ಹಸ್ತಾಂತರಿಸಿದರು. ರಾಮಕೃಷ್ಣ ಮಯ್ಯ ಅವರು ಅತಿಥಿಗಳನ್ನು ಸ್ವಾಗತಿಸಿದರು.

ಶ್ರೀ ಜಗದೀಶ ಕೆ.ಕೂಡ್ಲು ಇವರು ನಿರೂಪಿಸಿ, ಶ್ರೀ ಮೋಹನ್ ಕುಮಾರ್ ಶೆಟ್ಟಿ ಸಿರಿಬಾಗಿಲು ವಂದಿಸಿದರು. ಆ ಬಳಿಕ ಪ್ರಸಿದ್ದ ವೈದ್ಯರುಗಳಿಂದ 335 ಕ್ಕೂ ಹೆಚ್ಚು ನಾಗರಿಕರಿಗೆ ಉಚಿತ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಸಿರಿಬಾಗಿಲು ಪ್ರತಿಷ್ಠಾನದ ವತಿಯಿಂದ ಉಚಿತ ಕನ್ನಡಕ ಹಾಗು ಔಷದಗಳನ್ನು ನೀಡಲಾಯಿತು.

ನೀನೊಂದು ಮುಗಿಯದ ಕವಿತೆ ಕವನ ಸಂಕಲನ ಬಿಡುಗಡೆ ಮತ್ತು ಮುಗಿಯದ ಕವಿತೆಗೆ ಮನದ ಕವಿತೆ,ಕವಿಗೋಷ್ಠಿ

0

ಕಾವ್ಯ ಪರಂಪರೆ ಓದುಗರಿಗೆ ಹೊಸತನವನ್ನು ನೀಡುತ್ತದೆ. ಅನಾದಿ ಕಾಲದ ಜನರ ಸಂವಹನವೇ ಕಾವ್ಯ ಎಂದು ಹಿರಿಯ ಪತ್ರಕರ್ತರು, ವಾಗ್ಮಿ ಹಾಗೂ ಸಾಹಿತಿಗಳಾದ ಶ್ರೀ ಮನೋಹರ ಪ್ರಸಾದ್ ಹೇಳಿದರು. ಅವರು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ಘಟಕ, ಪುತ್ತೂರು ಚಿಗುರೆಲೆ ಸಾಹಿತ್ಯ ಬಳಗ ಹಾಗೂ ಸುದಾನ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಸುದಾನ ವಿದ್ಯಾಸಂಸ್ಥೆಗಳ ಎಡ್ವರ್ಡ್ ಸಭಾಂಗಣದಲ್ಲಿ ಶ್ರೀಮತಿ ಶಶಿಕಲಾ ವರ್ಕಾಡಿಯವರ ನೀನೊಂದು ಮುಗಿಯದ ಕವಿತೆ ಕವನ ಸಂಕಲನ
ಬಿಡುಗಡೆಗೊಳಿಸಿ ಕೃತಿ ಪರಿಚಯ ಮಾಡಿ ಮಾತನಾಡುತ್ತಿದ್ದರು.

ಕಾವ್ಯದ ಭಾಷೆ ಓದುಗರ ಮುಟ್ಟುವಂತಿರಬೇಕು. ಯಾವತ್ತೂ ನಡೆಯುವವನೇ ಎಡವುದಲ್ಲದೇ ಮಲಗಿದವನು ಎಡವುದಿಲ್ಲ ಎಂದು ನುಡಿದು, ಕೊನೆ ಎಂಬುದು ಆರಂಭದ ಹೆಜ್ಜೆಯಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ, ಹಿರಿಯ ಸಾಹಿತಿಗಳು ಮತ್ತು ವಿವೇಕಾನಂದ ಮಹಾ ವಿದ್ಯಾಲಯದ ಪರೀಕ್ಷಾಂಗ ಕುಲಸಚಿವರಾದ ಡಾ. ಹೆಚ್.ಜಿ.ಶ್ರೀಧರ್ ಅವರು
ಕಾವ್ಯದ ಶೈಲಿ ಬಗೆದಷ್ಟೂ ಆಳ. ಅದು ಎಂದಿಗೂ ಮುಗಿಯದ ಹರಿವು. ಜಗತ್ತಿಗೆ ಎಲ್ಲಾ ವಿಚಾರಗಳನ್ನು ಹೊಸತಾಗಿ ಕೊಡುವವನೇ ಕವಿ ಎಂದು ಹೇಳಿದರು.

ಖ್ಯಾತ ನ್ಯಾಯವಾದಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಶ್ರೀ ದುರ್ಗಾಪ್ರಸಾದ್ ರೈ ಕೃತಿಕಾರರ ಪರಿಚಯ ನೀಡಿದರು. ಮಾಜಿ ಶಾಸಕರಾದ ಶ್ರೀಮತಿ ಶಕುಂತಲಾ ಶೆಟ್ಟಿ, ಸುದಾನ ಶಾಲಾ ಸಂಚಾಲಕರಾದ ಶ್ರೀ ವಿಜಯ ಹಾರ್ವಿನ್, ದ.ಕ.ಜಿಲ್ಲಾ ಕ.ಸಾ.ಪ. ಗೌರವ ಕೋಶಾಧ್ಯಕ್ಷರಾದ ಶ್ರೀ ಐತ್ತಪ್ಪ ನಾಯ್ಕ್ ಕಾರ್ಯಕ್ರಮಕ್ಕೆ ಆಗಮಿಸಿ, ಉಪಸ್ಥಿತರಿದ್ದು ಶುಭ ನುಡಿದರು. ಈ ಸಂದರ್ಭದಲ್ಲಿ ಹಿರಿಯರಾದ ಶ್ರೀ ಮನೋಹರ ಪ್ರಸಾದ್ ಹಾಗೂ ಕವನ ಸಂಕಲನದ ಮುಖಪುಟ ವಿನ್ಯಾಸಕಾರ ಶ್ರೀ ಜಾನ್ ಚಂದ್ರನ್ ಇವರನ್ನು ವಿಶೇಷವಾಗಿ ಗೌರವಿಸಲಾಯಿತು.

ಚಿಗುರೆಲೆ ಸಾಹಿತ್ಯ ಬಳಗದ ಕುಮಾರಿ ಅಪೂರ್ವ ಕಾರಂತ್ ಪ್ರಾರ್ಥಿಸಿದರು. ನೀನೊಂದು ಮುಗಿಯದ ಕವಿತೆಯ ಕೃತಿಕಾರರಾದ ಶ್ರೀಮತಿ ಶಶಿಕಲಾ ವರ್ಕಾಡಿ ಸ್ವಾಗತಿಸಿ, ಚಿಗುರೆಲೆ ಸಾಹಿತ್ಯ ಬಳಗದ ಶ್ರೀಮತಿ ಸೌಮ್ಯ ರಾವ್ ಕಲ್ಲಡ್ಕ ವಂದಿಸಿದರು. ಯುವಸಾಹಿತಿ, ಕುಂಡಡ್ಕ ಗುಣಶ್ರೀ ವಿದ್ಯಾಲಯದ ಮುಖ್ಯಗುರುಗಳಾದ ಶ್ರೀ ರಾಜಾರಾಮ ವರ್ಮ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಕವನ ಸಂಕಲನ ಬಿಡುಗಡೆ ಬಳಿಕ ಪುತ್ತೂರು ಚಿಗುರೆಲೆ ಸಾಹಿತ್ಯ ಬಳಗದ ಶ್ರೀ ನಾರಾಯಣ ಕುಂಬ್ರ ಇವರ ಸಂಯೋಜನೆಯಲ್ಲಿ ದಕ್ಷಿಣ ಕನ್ನಡ, ಬೆಂಗಳೂರು, ಕಾಸರಗೋಡು ಪರಿಸರದ ಸುಮಾರು ಮಂದಿ ಯುವಕವಿಗಳಿಂದ “ಮುಗಿಯದ ಕವಿತೆಗೆ ಮನದ ಕವಿತೆ” ಎಂಬ ಕವಿಗೋಷ್ಠಿ ನಡೆಯಿತು. ಶಿಕ್ಷಕಿ ಹಾಗೂ ಖ್ಯಾತ ಸಾಹಿತಿಗಳಾದ ಶ್ರೀಮತಿ ವಿಜಯಲಕ್ಷ್ಮಿ ಕಟೀಲು ಕವಿಗೋಷ್ಠಿಯ ಸರ್ವಾಧ್ಯಕ್ಷತೆ ವಹಿಸಿದ್ದರು. ಸಾಹಿತಿಗಳಾದ ಶ್ರೀಮತಿ ಜೆಸ್ಸಿ. ಪಿ.ವಿ ಮತ್ತು ಶ್ರೀಮತಿ ಸುಪ್ರೀತಾ ಚರಣ್ ಪಾಲಪ್ಪೆ ಕವಿಗೋಷ್ಠಿಯ ನಿರೂಪಣೆಗೈದರು.

ಎಡನೀರು ಮಠದಲ್ಲಿ “ಹನುಮೋದ್ಭವ, ಇಂದ್ರಜಿತು ಕಾಳಗ” -ಯಕ್ಷಗಾನ ಪ್ರದರ್ಶನ

0

ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆಯ ಪ್ರಯುಕ್ತ ದಿನಾಂಕ 10-09-2023, ಆದಿತ್ಯವಾರ ಅಪರಾಹ್ನ ಘಂಟೆ 2ರಿಂದ ಎಡನೀರು ಮಠದಲ್ಲಿ ಹನುಮೋದ್ಭವ, ಇಂದ್ರಜಿತು ಕಾಳಗ” ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ವಿವರಗಳಿಗೆ ಚಿತ್ರ ನೋಡಿ.